ಸೋಮವಾರ, ಮೇ 23, 2022
30 °C

ಪ್ರಭಾಸ್ ನಟನೆಯ ‘ಆದಿಪುರುಷ್‌’ 2022ರ ಆಗಸ್ಟ್‌ನಲ್ಲಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ನಟನೆಯ ಮುಂದಿನ ಬಹುನಿರೀಕ್ಷಿತ ಚಿತ್ರ ‘ಆದಿಪುರುಷ್‌’. ಆರಂಭದಿಂದಲೂ ಸುದ್ದಿ ಮಾಡುತ್ತಿರುವ ಈ ಸಿನಿಮಾದ ಮೇಲೆ ಅಭಿಮಾನಿಗಳು ಅಪಾರ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾದ ಟೈಟಲ್ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಈಗ ಬಿಡುಗಡೆಯ ದಿನಾಂಕವನ್ನು ತಿಳಿಸಿದೆ. ಆದಿಪುರುಷ್ ಸಿನಿಮಾವೂ ಆಗಸ್ಟ್ 11, 2022ಕ್ಕೆ ತೆರೆ ಕಾಣಲಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ ನಿರ್ದೇಶಕ ಓಂ ರಾವತ್‌.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಪ್ರಭಾಸ್ ನಟನೆಯ ‘ರಾಧೇ ಶ್ಯಾಮ್’ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದ್ದ ಆ ಚಿತ್ರದ ಬಿಡುಗಡೆಯ ದಿನಾಂಕ ಇನ್ನು ತಿಳಿದು ಬಂದಿಲ್ಲ. 2022ರಲ್ಲಿ ಪ್ರಭಾಸ್ ಅಭಿಮಾನಿಗಳಿಗೆ ಇದು ಸ್ವಾತಂತ್ರ್ಯೋತ್ಸವದ ಉಡುಗೊರೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಬಾಲಿವುಡ್‌ನ ಯಶಸ್ವಿ ನಿರ್ದೇಶಕ ಓಂ ರಾವತ್ ನಿರ್ದೇಶನದ ಈ ಸಿನಿಮಾದಲ್ಲಿ ಪ್ರಭಾಸ್ ರಾಮನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಸೈಫ್ ಅಲಿಖಾನ್ ಪ್ರಭಾಸ್‌ಗೆ ಎದುರಾಳಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತಯಾರಾಗುತ್ತಿದ್ದು ತಮಿಳು, ಕನ್ನಡ ಹಾಗೂ ಇತರ ಭಾಷೆಗಳಿಗೆ ಡಬ್ ಆಗುತ್ತಿದೆ.
ಭೂಷಣ್ ಕುಮಾರ್ ಸಿನಿಮಾಕ್ಕೆ ಹಣ ಹೂಡಿಕೆ ಮಾಡುತ್ತಿದ್ದು ಪ್ರಿ–ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು