ಅದಿತಿ ಪ್ರಭುದೇವ ಹೆಸರು ಬದಲಿಸಿಕೊಂಡ್ರಾ?... ಊಹುಂ ಇಲ್ಲ. ಅವರು ಅಭಿನಯಿಸುತ್ತಿರುವ ಚಿತ್ರದ ಹೆಸರು ‘ಅಲೆಕ್ಸಾ’. ಚಿತ್ರದ ಶೂಟಿಂಗ್ ಈಗ ಮುಕ್ತಾಯದ ಹಂತದಲ್ಲಿದೆ.

ಜೀವಾ ನಿರ್ದೇಶನದ ಈ ಚಿತ್ರಕ್ಕೆ ಇತ್ತೀಚೆಗೆ ರಾಮಮೂರ್ತಿ ನಗರದ ಬಳಿ ಸಾಹಸ ಚಿತ್ರೀಕರಣ ನಡೆಯಿತು. ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಸಾಹಸ ಸಂಯೋಜನೆಯಲ್ಲಿ ಭರ್ಜರಿ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆದಿದೆ. ಅದಿತಿ ಪ್ರಭುದೇವ, ಪವನ್ ತೇಜ್ ಈ ಸಾಹಸ ಸನ್ನಿವೇಶದಲ್ಲಿ ಭಾಗವಹಿಸಿದ್ದರು.

ಕಳೆದ 24 ವರ್ಷಗಳಿಂದ ಜೀವಾ ಅವರಿಗೆ ಕನ್ನಡ ಚಿತ್ರರಂಗದೊಂದಿಗೆ ನಂಟು. ಹೆಸರಾಂತ ತಂತ್ರಜ್ಞರ ಜೊತೆ ಕೆಲಸ ಮಾಡಿರುವ ಜೀವಾ ಅವರು ಪ್ರಜ್ವಲ್ ದೇವರಾಜ್ ಅಭಿನಯದ 25ನೇ ಚಿತ್ರ ‘ಭುಜಂಗ’ ಚಿತ್ರವನ್ನು ನಿರ್ದೇಶಿಸಿದ್ದರು. ಇದು ಅವರ ನಿರ್ದೇಶನದ ಎರಡನೇ ಚಿತ್ರ.

ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೇಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ವಿ.ಚಂದ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಡಾ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದಿದ್ದು, ಎ.ಪಿ.ಒ ಸಂಗೀತ ನೀಡಿದ್ದಾರೆ. ಸಾಯಿ ಸತೀಶ್ ಛಾಯಾಗ್ರಹಣ, ಉಮೇಶ್ ಸಂಕಲನ, ಚಂದ್ರು, ರಾಮು ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಮಾಸ್ ಮಾದ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅದಿತಿ ಪ್ರಭುದೇವ ವಿಶೇಷ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ತೇಜ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ನಾಗಿಣಿ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಾಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ,
ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.