ಭಾನುವಾರ, ಅಕ್ಟೋಬರ್ 24, 2021
28 °C

ತೆಲುಗು ನಟ ಅಡಿವಿ ಶೇಷ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಟಾಲಿವುಡ್‌ ನಟ ಅಡಿವಿ ಶೇಷ್ ತೀವ್ರ ಅನಾರೋಗ್ಯದಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ’ಮೇಜರ್‌’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. 

ಅವರು ಕಳೆದೊಂದು ವಾರದಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು. ಎರಡು ದಿನಗಳ ಹಿಂದೆ ರಕ್ತದ ಪ್ಲೇಟ್‌ಲೆಟ್‌ಗಳ ಹಠಾತ್ ಕುಸಿತದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. 

ಅಡಿವಿ ಶೇಷ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಎರಡು-ಮೂರು ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಿನ್ಸ್ ಮಹೇಶ್ ಬಾಬು ನಿರ್ಮಾಣದ ’ಮೇಜರ್‌’ ಸಿನಿಮಾದಲ್ಲಿ ಅಡಿವಿ ಶೇಷ್‌ ನಾಯಕ ನಟರಾಗಿ ನಟಿಸಿದ್ದಾರೆ. 26/11 ಮುಂಬೈ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜೀವನ ಆಧರಿಸಿದ ಸಿನಿಮಾವಾಗಿದೆ.

ಶಶಿ ಕಿರಣ್ ಟಿಕ್ಕ ನಿರ್ದೇಶನದ ’ಮೇಜರ್’ ಸಿನಿಮಾ ಜುಲೈ ತಿಂಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಕೋವಿಡ್‌ ಕಾರಣದಿಂದಾಗಿ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿತ್ತು.  ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಇನ್ನು ಘೋಷಣೆ ಮಾಡಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು