ತಿರುವನಂತಪುರಂ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಅಡೂರ್ ಗೋಪಾಲಕೃಷ್ಣನ್ ಅವರು, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗುವ ಚಿತ್ರಗಳ ಕುರಿತು ಟೀಕಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಅಡೂರ್ ಗೋಪಾಲಕೃಷ್ಣನ್ ಅವರು, ‘ಕೆಲವು ವರ್ಷಗಳಿಂದ ಕಳಪೆ ಗುಣಮಟ್ಟದ ಸಿನಿಮಾಗಳನ್ನು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ. ಜ್ಯೂರಿಗಳು ಸರಿಯಾಗಿದ್ದರೆ, ಚಿತ್ರಗಳ ಆಯ್ಕೆಯೂ ಸರಿಯಾಗಿರುತ್ತದೆ. ಕಳಪೆ ಗುಣಮಟ್ಟದ ಚಿತ್ರಗಳು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಲು ಕಾರಣ ಏನು ಎಂಬುವುದರ ಬಗ್ಗೆ ತನಿಖೆ ನಡೆಯಬೇಕು’ ಎಂದಿದ್ದಾರೆ.
.Video: ‘ಹಸ್ರವ್ವ‘ ಹಾಡಿನ ರೆಕಾರ್ಡಿಂಗ್ ವಿಡಿಯೊ ಹಂಚಿಕೊಂಡ ಪ್ರಿಯಾ ಸುದೀಪ್ .
ಈ ಪರಿಸ್ಥಿತಿ ಹೀಗೆ ಮುಂದುವರಿದರೆ, ಚಲನಚಿತ್ರಗಳಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು ಉತ್ತಮ ಎಂದು ಗೋಪಾಲಕೃಷ್ಣನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.