ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃತಿಕ್‌, ದೀಪಿಕಾ ಅಭಿನಯದ ‘ಫೈಟರ್‌’ ಚಿತ್ರದ ಮುಂಗಡ ಟಿಕೆಟ್‌ ಬುಕಿಂಗ್‌ ಆರಂಭ

Published 20 ಜನವರಿ 2024, 10:14 IST
Last Updated 20 ಜನವರಿ 2024, 10:14 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ದಾರ್ಥ್‌ ಆನಂದ್‌ ನಿರ್ದೇಶನದ ಹೃತಿಕ್‌, ದೀಪಿಕಾ ಅಭಿನಯದ ಬಾಲಿವುಡ್‌ನ ಬಹುನಿರೀಕ್ಷಿತ ‘ಫೈಟರ್‌’ ಸಿನಿಮಾದ ಮುಂಗಡ ಟಿಕೆಟ್‌ ಬುಕಿಂಗ್‌ ಇಂದು ( ಶನಿವಾರ) ಆರಂಭವಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡ ನಟ ಹೃತಿಕ್‌ ರೋಷನ್, ಇದೇ 25ರಂದು ಗಣರಾಜ್ಯೋತ್ಸವದ ಅಂಗವಾಗಿ ವಿಶ್ವದಾದ್ಯಂತ ಫೈಟರ್‌ ಚಿತ್ರ ತೆರೆಗೆ ಅಪ್ಪಳಿಸಲಿದ್ದು, ಮುಂಗಡ ಟಿಕೆಟ್ ಬುಕಿಂಗ್‌ ಆರಂಭವಾಗಿದೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ವಾಯುಪಡೆಯ ಅಧಿಕಾರಿ ಮಿನಲ್‌ ರಾಥೋರ್‌ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡರೆ, ಶ್ಯಾಮ್‌ಶೇರ್‌ ಪಟಾನಿಯಾ ಪಾತ್ರದಲ್ಲಿ ನಟ ಹೃತಿಕ್‌ ರೋಷನ್‌ ಅಭಿನಯಿಸಿದ್ದಾರೆ.

ನಿರ್ದೇಶಕ ಸಿದ್ದಾರ್ಥ್‌ ಆನಂದ್‌ ಅವರು ‘ಫೈಟರ್’ ಸಿನಿಮಾ ಮೂಲಕ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ, ದೇಶಭಕ್ತಿ ಮತ್ತು ತ್ಯಾಗದ ಕಥೆ ಹೇಳಲಿದ್ದಾರೆ.

ಈ ಚಿತ್ರವನ್ನು ವಯಾಕಾಮ್ 18 ಸ್ಟುಡಿಯೋಸ್ ಮತ್ತು ಮಾರ್ಫ್ಲಿಕ್ಸ್ ಪಿಕ್ಚರ್ಸ್ ನಿರ್ಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT