ಲಾಕ್ಡೌನ್ ಬಳಿಕ ಥಿಯೇಟರ್ನಲ್ಲಿ ಬಿಡುಗಡೆಯಾಗಿ 50 ದಿನಗಳನ್ನು ಪೂರೈಸಿದ ಮೊದಲ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಮಂಸೋರೆ ನಿರ್ದೇಶನದ ‘ಆ್ಯಕ್ಟ್–1978’. ಈ ಚಿತ್ರವು 2020ರ ನವೆಂಬರ್ 20ಕ್ಕೆ ಬಿಡುಗಡೆಯಾಗಿತ್ತು. ಲಾಕ್ಡೌನ್ ಬಳಿಕ ಥಿಯೇಟರ್ನಲ್ಲಿ ಸಿನಿಮಾ ಬಿಡುಗಡೆಗೆ ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಬಿಡುಗಡೆಯಾದ ಮೊದಲ ಸಿನಿಮಾ ಇದಾಗಿದೆ.

ಈ ಸಂಭ್ರಮವನ್ನು ಆಚರಿಸಲು ನಟ ಸಂಚಾರಿ ವಿಜಯ್ ಹಾಗೂ ಇತರರು ಮೈಸೂರಿನ ಮಲ್ಟಿಪ್ಲೆಕ್ಸ್ ಸಿನಿಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳ ಜೊತೆ ಸಂವಾದ ನಡೆಸಿದ್ದರು. ಸಂಚಾರಿ ವಿಜಯ್ ಚಿತ್ರದಲ್ಲಿ ಪೊಲೀಸ್ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಈ ಚಿತ್ರವು ವಿಮರ್ಶಕರು ಸಿನಿಪ್ರೇಮಿಗಳಿಂದ ಮೆಚ್ಚುಗೆ ಗಳಿಸಿತ್ತು. ಈಗಲೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಆ್ಯಕ್ಟ್–1978’. ಚಿತ್ರದಲ್ಲಿ ಯಜ್ಞಾ ಶೆಟ್ಟಿ, ಪ್ರಮೋದ್ ಶೆಟ್ಟಿ, ಅವಿನಾಶ್, ಅಚ್ಚುತ್ಕುಮಾರ್, ಶೋಭ್ರಾಜ್ ಹಾಗೂ ಬಿ. ಸುರೇಶ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ದಯಾನಂದ ಟಿ.ಕೆ. ಹಾಗೂ ವೀರೇಂದ್ರ ಮಲ್ಲಣ್ಣ ಈ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದಾರೆ. ಸತ್ಯ ಹೆಗಡೆ ಸಿನಿಮಾಟೊಗ್ರಫಿ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.