ಗುರುವಾರ , ಮೇ 26, 2022
24 °C

ಮಲಯಾಳಂ ನಟ ದುಲ್ಖರ್ ಸಲ್ಮಾನ್‍ಗೆ ಕೋವಿಡ್ ಪಾಸಿಟಿವ್

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಮಾಲಿವುಡ್‌ನ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟಿ ಅವರಿಗೆ ಕೊರೊನಾ ಪಾಸಿಟಿವ್ ಬಂದ ಕೆಲವು ದಿನಗಳಲ್ಲಿ ಅವರ ಮಗ ದುಲ್ಖರ್ ಸಲ್ಮಾನ್ ಅವರಿಗೂ ಕೋವಿಡ್‌ ಪಾಸಿಟಿವ್ ಬಂದಿದೆ.

ದುಲ್ಖರ್ ಸಲ್ಮಾನ್ ಅವರು ತಮಗೆ ಕೋವಿಡ್‌ ದೃಢಪಟ್ಟಿರುವ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ. ಜ್ವರ ಸೇರಿದಂತೆ ಸೌಮ್ಯ ಲಕ್ಷಣಗಳನ್ನು ಹೊಂದಿದ್ದೇನೆ. ಆದರೆ, ಚೆನ್ನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿತ್ರೀಕರಣದ ಸಮಯದಲ್ಲಿ ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರೂ ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ಜತೆಗೆ, ಸಾರ್ವಜನಿಕರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕೋವಿಡ್‌ ನಿಯಮಗಳನ್ನು ತಪ್ಪದೆ ಪಾಲಿಸಿ’ ಎಂದು ಮನವಿ ಮಾಡಿದ್ದಾರೆ.

ಓದಿ... T20 World Cup 2022: ಅ.23ರಂದು ಭಾರತ –ಪಾಕಿಸ್ತಾನದ ನಡುವೆ ಹೈವೋಲ್ಟೆಜ್ ಕದನ

70 ವರ್ಷದ ಮಮ್ಮುಟ್ಟಿ ಅವರಿಗೆ ಜ.16ರಂದು ಕೋವಿಡ್‌ ದೃಢಪಟ್ಟಿತ್ತು. ಈ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕೆ.ಮಧು ನಿರ್ದೇಶನದ 'ಸಿಬಿಐ 5' ಸಿನಿಮಾದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ.

ಮಮ್ಮುಟ್ಟಿ ಅವರು ಈ ಸಿನಿಮಾದಲ್ಲಿ ಸೇತುರಾಮನ್ ಅಯ್ಯರ್ ಅವರ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಮುಕೇಶ್ ಮತ್ತು ಜಗತಿ ಶ್ರೀಕುಮಾರ್ ಸೇರಿದಂತೆ ಪ್ರಮುಖ ತಾರಾಗಣವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು