ಮಂಗಳವಾರ, ಮೇ 24, 2022
26 °C

ತಾನಿಯಾ ಶ್ರಾಫ್‌ ಜತೆ ಡೇಟಿಂಗ್‌: ಮದುವೆ ಯೋಚನೆ ಮಾಡಿಲ್ಲ ಎಂದ ಅಹಾನ್‌ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ನಟ ಸುನೀಲ್ ಶೆಟ್ಟಿ ಪುತ್ರ ಅಹಾನ್‌ ಶೆಟ್ಟಿ ಅವರು ಗೆಳತಿ ತಾನಿಯಾ ಶ್ರಾಫ್‌ ಅವರ ಜತೆಗಿನ ಮದುವೆಯ ಬಗ್ಗೆ ಮೌನ ಮುರಿದಿದ್ದಾರೆ.

ಸದ್ಯ ನಾವು ಮದುವೆಯ ಬಗ್ಗೆ ಯೋಚನೆ ಮಾಡಿಲ್ಲ, ಹಾಗೇ ಮದುವೆಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೆ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಿ.ವಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ಅವರು ಖಚಿತಪಡಿಸಿದ್ದಾರೆ.

ಅಹಾನ್‌ ಮತ್ತು ತಾನಿಯಾ ಶ್ರಾಫ್‌ ಕೆಲ ವರ್ಷಗಳಿಂದ ಡೇಟಿಂಗ್‌ ಮಾಡುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಪರಸ್ಪರ ಒಟ್ಟಿಗೆ ಇರುವ ಚಿತ್ರಗಳನ್ನು ಶೇರ್‌ ಮಾಡುತ್ತಿರುತ್ತಾರೆ. ಅಹಾನ್‌ ಶೆಟ್ಟಿ ಕೂಡ ತಾನಿಯಾ ಶ್ರಾಫ್ ಅವರ ಹಾಟ್‌ ಚಿತ್ರಗಳನ್ನು ಆಗಾಗ ಪ್ರಕಟಿಸುತ್ತಿರುತ್ತಾರೆ. 

ಇದನ್ನೂ ಓದಿ: 

ತಡಪ್‘ ಚಿತ್ರದ ಮೂಲಕ ಅಹಾನ್ ಶೆಟ್ಟಿ ಬಾಲಿವುಡ್‌ನಲ್ಲಿ ಗಮನಸೆಳೆದಿದ್ದಾರೆ. ತಾನಿಯಾ ಶ್ರಾಫ್ ಅವರು ಉದ್ಯಮಿ ಜೈದೇವ್ ಮತ್ತು ರೂಮಿಲಾ ಶ್ರಾಫ್ ಅವರ ಪುತ್ರಿಯಾಗಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು