ಗುರುವಾರ , ಜನವರಿ 27, 2022
21 °C

2022: ಮಗಳೊಂದಿಗೆ ಹೊಸ ವರ್ಷದ ಶುಭಾಶಯ ಕೋರಿದ ನಟಿ ಐಶ್ವರ್ಯ ರೈ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ನಟಿ ಐಶ್ವರ್ಯ ರೈ ಅವರು ಹೊಸ ವರ್ಷದ ಶುಭಾಶಯ ಕೋರಿದ್ದಾರೆ. 

ಮಗಳು ಆರಾಧ್ಯಳ ಜೊತೆಗಿನ ಸೆಲ್ಫಿಯನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ 2022ನೇ ವರ್ಷಕ್ಕೆ ಶುಭ ಹಾರೈಸಿದ್ದಾರೆ. 

‘ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಪ್ರೀತಿ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಂತೋಷವನ್ನು ದೇವರು ನಿಮಗೆ ಕರುಣಿಸಲಿ’ ಎಂದು ಐಶ್ವರ್ಯ ತಿಳಿಸಿದ್ದಾರೆ. 

ಹೆಚ್ಚಿನ ಅಭಿಮಾನಿಗಳು ಐಶ್ವರ್ಯ ಅವರಿಗೆ ಹೊಸ ವರ್ಷಕ್ಕೆ ಶುಭಾಶಯ ಕೋರಿ ಕಾಮೆಂಟ್‌ ಮಾಡಿದ್ದಾರೆ.

‘ನಿಧಾನವಾಗಿ ಆರಾಧ್ಯ ಈ ಖಾತೆಯ ಮೇಲೆ ನಿಯಂತ್ರಣ ಹೊಂದುತ್ತಿದ್ದಾರೆ’ ಎಂದು ವ್ಯಕ್ತಿಯೊಬ್ಬರು ಕಾಮೆಂಟಿಸಿದ್ದಾರೆ. 

ಐಶ್ವರ್ಯ ಅವರು ಕೊನೆಯ ಬಾರಿಗೆ ಬೆಳ್ಳಿಪರದೆಯ ಮೇಲೆ ಕಾಣಿಸಿಕೊಂಡದ್ದು 2018ರಲ್ಲಿ. ಕಳೆದ ಹನ್ನೊಂದು ವರ್ಷಗಳಲ್ಲಿ, ಅವರು ಕೇವಲ ನಾಲ್ಕು ಚಿತ್ರಗಳನ್ನು ಮಾಡಿದ್ದಾರೆ.

ವಿಕ್ರಮ್, ಕಾರ್ತಿ ಮತ್ತು ಜಯಂ ರವಿ ನಟಿಸಿರುವ ಪೊನ್ನಿಯಿನ್ ಸೆಲ್ವನ್ ಚಿತ್ರದ ಮೂಲಕ ಐಶ್ವರ್ಯ ಈ ವರ್ಷ ತಮಿಳು ಚಿತ್ರರಂಗಕ್ಕೆ ಮರಳುತ್ತಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು