ಶುಕ್ರವಾರ, ಅಕ್ಟೋಬರ್ 22, 2021
29 °C

ಪ್ಯಾರಿಸ್ ಫ್ಯಾಷನ್ ವೀಕ್‌ನಲ್ಲಿ ಶ್ವೇತ ವಸ್ತ್ರ ಧರಿಸಿ ಕಂಗೊಳಿಸಿದ ಐಶ್ವರ್ಯ ರೈ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Paris: Aishwarya Rai Bachchan wears a creation for the L'Oreal Spring-Summer 2022 ready-to-wear fashion show presented in Paris, Sunday, Oct. 3, 2021. AP/PTI(AP10_03_2021_000231B)

ಬೆಂಗಳೂರು: ನಟಿ ಐಶ್ವರ್ಯ ರೈ ಬಚ್ಚನ್ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಲೋರಿಯಲ್ ಪ್ಯಾರಿಸ್ ಆಯೋಜಿಸಿರುವ ‘ಪ್ಯಾರಿಸ್ ಫ್ಯಾಷನ್ ವೀಕ್‌’ನಲ್ಲಿ ಭಾಗವಹಿಸಿದ್ದಾರೆ.

ಲೋರಿಯಲ್ ಪ್ಯಾರಿಸ್ ಬ್ರ್ಯಾಂಡ್ ರಾಯಭಾರಿಯೂ ಆಗಿರುವ 47 ವರ್ಷದ ನಟಿ ಐಶ್ವರ್ಯ ರೈ ಬಚ್ಚನ್, ಶ್ವೇತ ವರ್ಣದ ಗೌನ್ ಧರಿಸಿ ರಾಂಪ್‌ನಲ್ಲಿ ಹೆಜ್ಜೆ ಹಾಕಿದ್ದಾರೆ.

ಅಂತರರಾಷ್ಟ್ರೀಯ ಖ್ಯಾತಿಯ ಸೆಲೆಬ್ರಿಟಿಗಳು ಪ್ಯಾರಿಸ್ ಫ್ಯಾಷನ್ ವೀಕ್‌ನಲ್ಲಿ ಭಾಗವಹಿಸಿದ್ದು, ಬ್ರಿಟಿಷ್ ನಟಿ ಹೆಲೆನ್ ಮಿರನ್ ಮತ್ತು ಕ್ಯಾಮಿಲಾ ಕಾಬೆಲೊ ಜತೆ ಐಶ್ವರ್ಯ ಹೆಜ್ಜೆ ಹಾಕಿದ್ದು, ಅವರ ಫೋಟೊಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ.


ಪ್ಯಾರಿಸ್ ಫ್ಯಾಷನ್ ವೀಕ್‌

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಪ್ರಸಿದ್ಧ ಐಫೆಲ್ ಟವರ್ ಬಳಿ ಪ್ಯಾಷನ್ ವೀಕ್ ಆಯೋಜಿಸಲಾಗಿದ್ದು, ಹಾಲಿವುಡ್‌ನ ಖ್ಯಾತ ನಟ-ನಟಿಯರ ದಂಡೇ ಅಲ್ಲಿ ಸೇರಿದೆ.

ಈ ಬಗ್ಗೆ ಲೋರಿಯಲ್ ಪ್ಯಾರಿಸ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಕಿರು ವಿಡಿಯೊ ಒಂದನ್ನು ಕೂಡ ಪೋಸ್ಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು