ಶುಕ್ರವಾರ, ಜನವರಿ 24, 2020
27 °C

ಮಣಿರತ್ನಂ ಸಿನಿಮಾದಲ್ಲಿ ಐಶ್ವರ್ಯಾ ರೈ ದ್ವಿಪಾತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಣಿರತ್ನಂ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಪೊನ್ನಿಯನ್ ಸೆಲ್ವನ್’ ಚಿತ್ರೀಕರಣಕ್ಕೂ ಮುನ್ನವೇ ಹೆಚ್ಚು ಸುದ್ದಿ ಮಾಡುತ್ತಿದೆ. ಭಾರತೀಯ ಸಿನಿಮಾರಂಗದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಐಶ್ವರ್ಯಾ ರೈ ಬಚ್ಚನ್ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಂದಿನಿ ಹಾಗೂ ಆಕೆಯೆ ತಾಯಿ ರಾಣಿ ಮಂದಾಕಿನಿ ಪಾತ್ರದಲ್ಲಿ ಐಶ್ ಬಣ್ಣ ಹಚ್ಚುತ್ತಿದ್ದಾರೆ.

ಕಳೆದ ವಾರ ಚಿತ್ರದ ಶೀರ್ಷಿಕೆಯ ಪೋಸ್ಟರ್ ಬಿಡುಗಡೆಯಾಗಿದ್ದು, ಈ ತಿಂಗಳಿನಿಂದಲೇ ಚಿತ್ರೀಕರಣ ಆರಂಭವಾಗಲಿದೆ. ಐಶ್ವರ್ಯ ರೈ ಕೂಡ ಈ ತಿಂಗಳ ಅಂತ್ಯಕ್ಕೆ ಚಿತ್ರತಂಡ ಸೇರಲಿದ್ದಾರೆ.

ಈ ಸಿನಿಮಾದಲ್ಲಿ ನಟಿಸುತ್ತಿರುವ ಬಗ್ಗೆ ಸಂತಸ ಹಂಚಿಕೊಂಡಿದುವ ಐಶ್ವರ್ಯ ರೈ ‘ಮಣಿರತ್ನಂ ಅವರ ಜೊತೆಯಲ್ಲಿ ಕೆಲಸ ಮಾಡುವುದು ನನಗೆ ಖುಷಿ. ಅವರು ನನ್ನ ಗುರುಗಳು. ‘ಪೊನ್ನಿಯನ್ ಸೆಲ್ವನ್’ ಸಿನಿಮಾದಲ್ಲಿ ನಟಿಸುವುದಕ್ಕೆ ಕಾಯುತ್ತಿದ್ದೇನೆ' ಎಂದಿದ್ದಾರೆ.

ಸಿನಿಮಾದಲ್ಲಿ ತಮಿಳು ನಟ ವಿಕ್ರಮ್, ಕಾರ್ತಿ, ತ್ರಿಷಾ, ಕೀರ್ತಿ ಸುರೇಶ್, ಜಯಂ ರವಿ, ಐಶ್ವರ್ಯ ರಾಜೇಶ್ ಸೇರಿ ಹಲವು ಪ್ರಮುಖ ಕಲಾವಿದರು ಅಭಿನಯಿಸಲಿದ್ದಾರೆ. ಚಿತ್ರಕ್ಕೆ ಎ.ಆರ್. ರೆಹಮಾನ್‌ ಸಂಗೀತವಿದೆ. ರವಿ ವರ್ಮನ್ ಛಾಯಾಗ್ರಹಣವಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು