ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉತ್ತರಕಾಂಡ’ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದ ತಮಿಳು ನಟಿ ಐಶ್ವರ್ಯ ರಾಜೇಶ್‌

Published 23 ಏಪ್ರಿಲ್ 2024, 10:31 IST
Last Updated 23 ಏಪ್ರಿಲ್ 2024, 10:31 IST
ಅಕ್ಷರ ಗಾತ್ರ

ಧನಂಜಯ ನಟನೆಯ ‘ಉತ್ತರಕಾಂಡ’ ಸಿನಿಮಾದಿಂದ ನಟಿ ರಮ್ಯಾ ಹೊರನಡೆದ ಬಳಿಕ ಆ ಸ್ಥಾನಕ್ಕೆ ಯಾರು ಬರಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಬಹುಭಾಷಾ ನಟಿ ಐಶ್ವರ್ಯ ರಾಜೇಶ್‌ ಧನಂಜಯಗೆ ಜೋಡಿಯಾಗಿ ನಟಿಸಲಿದ್ದಾರೆ. 

‘ದುರ್ಗಿ’ ಎಂಬ ಪಾತ್ರದಲ್ಲಿ ಅವರು ನಟಿಸಲಿದ್ದು, ಈಗಾಗಲೇ ತಂಡ ಸೇರಿಕೊಂಡಿದ್ದಾರೆ. ‘ದಿ ಗ್ರೇಟ್ ಇಂಡಿಯನ್ ಕಿಚನ್’, ‘ದಿ ವರ್ಲ್ಡ್ ಫೇಮಸ್ ಲವರ್’, ‘ವಡಾ‌ ಚೆನ್ನೈ’, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಕಾಕ ಮುತ್ತೈ’, ‘ಜೋಮೋಂಡೆ ಸುವಿಶೇಷಂಗಳ್’ ಸೇರಿದಂತೆ ಹಲವಾರು ಹಿಟ್‌ ಚಿತ್ರಗಳಲ್ಲಿ ಐಶ್ವರ್ಯ ನಟಿಸಿದ್ದಾರೆ.

ರೋಹಿತ್ ಪದಕಿ ಸಾರಥ್ಯದಲ್ಲಿ ಚಿತ್ರದ ಮೊದಲ ಹಂತದ ಚಿತ್ರೀಕರಣ ವಿಜಯಪುರದಲ್ಲಿ ನಡೆಯುತ್ತಿದೆ. ಚಿತ್ರದ ವಿಶೇಷ ಏನು ಎಂದರೆ ನಿರ್ದೇಶಕ ಯೋಗರಾಜ್‌ ಭಟ್‌ ಅವರೂ ‘ಪಾಟೀಲ’ ಎಂಬ ಪಾತ್ರಕ್ಕೆ ಬಣ್ಣಹಚ್ಚಿದ್ದಾರೆ. ಮಲಯಾಳ ಚಿತ್ರರಂಗದ ನಟ ವಿಜಯ್ ಬಾಬು, ರಂಗಾಯಣ ರಘು, ಉಮಾಶ್ರೀ, ಗೋಪಾಲಕೃಷ್ಣ ದೇಶಪಾಂಡೆ ತಾರಾಬಳಗದಲ್ಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT