ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಶ್ವರ್ಯಾ ರಜನಿಕಾಂತ್‌ಗೆ ಕೋವಿಡ್ ಪಾಸಿಟಿವ್: ಆಸ್ಪತ್ರೆಗೆ ದಾಖಲು

Last Updated 2 ಫೆಬ್ರುವರಿ 2022, 6:54 IST
ಅಕ್ಷರ ಗಾತ್ರ

ಮುಂಬೈ: ಚಿತ್ರ ನಿರ್ದೇಶಕಿ, ನಿರ್ಮಾಪಕಿ ಐಶ್ವರ್ಯಾ ರಜನಿಕಾಂತ್‌ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮಿಳು ಸೂಪರ್ ಸ್ಟಾರ್‌ ರಜನಿಕಾಂತ್ ಅವರ ಹಿರಿಯ ಮಗಳು ಐಶ್ವರ್ಯಾ, ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೊ ಸಮೇತ ಪೋಸ್ಟ್ ಮಾಡಿರುವ ಅವರು, ‘ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿದ ಬಳಿಕವೂ ನನಗೆ ಕೋವಿಡ್‌ ದೃಢಪಟ್ಟಿದೆ. ದಯವಿಟ್ಟು ಎಲ್ಲರೂ ತಪ್ಪದೇ ಮಾಸ್ಕ್‌ ಧರಿಸಿ, ಲಸಿಕೆ ಹಾಕಿಸಿಕೊಂಡು ಸುರಕ್ಷಿತವಾಗಿರಿ’ ಎಂದು ಬರೆದುಕೊಂಡಿದ್ದಾರೆ.

ಕಳೆದ ತಿಂಗಳು ನಟ ಧನುಷ್‌ ಹಾಗೂ ಐಶ್ವರ್ಯಾ ದಂಪತಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು.

ಐಶ್ವರ್ಯಾ ಅವರನ್ನು ಧನುಷ್‌ ಅವರು 2004ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT