ಭಾನುವಾರ, ಆಗಸ್ಟ್ 1, 2021
27 °C

ನಟ ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಗೆ ಕೋವಿಡ್‌–19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ಅರ್ಜುನ್‌ ಸರ್ಜಾ ಅವರ ಪುತ್ರಿ ಐಶ್ವರ್ಯ ಅರ್ಜುನ್ ಅವರಿಗೆ ಕೋವಿಡ್‌–19 ಸೋಂಕು ಇಡುವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ನನಗೆ ಇತ್ತೀಗಷ್ಟೇ ಕೋವಿಡ್‌–19 ಇರುವುದು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದೇನೆ. ನುರಿತ ವೈದ್ಯಕೀಯ ಸಿಬ್ಬಂದಿಯ ಸಲಹೆ ಮೇರೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿದ್ದೇನೆ. ಕೆಲವು ದಿನಗಳ ಹಿಂದೆ ನನ್ನೊಟ್ಟಿಗೆ ಯಾರಾದರೂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರೆ ಹುಷಾರಾಗಿದ್ದು, ಸೂಕ್ತ ವೈದ್ಯಕೀಯ ಸೇವೆ ಪಡೆಯಿತು. ಮಾಸ್ಕ್‌ ಧರಿಸುವುದನ್ನು ಮರೆಯಬೇಡಿ’ ಎಂದು ಕೋರಿದ್ದಾರೆ.

ಎರಡು ವರ್ಷದ ಹಿಂದೆ ಕನ್ನಡದಲ್ಲಿ ತೆರೆಕಂಡ ಕನ್ನಡದ ‘ಪ್ರೇಮಬರಹ’ ಚಿತ್ರದ ಮೂಲಕ ಐಶ್ವರ್ಯ ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಇದನ್ನು ನಿರ್ದೇಶಿಸಿದ್ದು ಅರ್ಜುನ್‌ ಸರ್ಜಾ. ಚಂದನ್‌ ಕುಮಾರ್‌ ನಾಯಕ ನಟನಾಗಿ ನಟಿಸಿದ್ದರು.

ಕೆಲವು ದಿನಗಳ ಹಿಂದೆ ನಟ ಧ್ರುವ ಸರ್ಜಾ ಮತ್ತು ಪ್ರೇರಣಾ ಶಂಕರ್‌ಗೂ ಕೋವಿಡ್‌–19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಧ್ರುವ ಅವರೇ ಟ್ವಿಟರ್‌ನಲ್ಲಿ ಈ ಬಗ್ಗೆ ಹೇಳಿದ್ದರು. ಈಗ ಇಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು