ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ.‘ಪೊನ್ನಿಯಿನ್ ಸೆಲ್ವನ್’ ಕಾದಂಬರಿಯನ್ನು ಹೆಸರಿನಲ್ಲಿಯೇ ಸಿನಿಮಾ ಮಾಡುತ್ತಿದ್ದಾರೆ ಮಣಿರತ್ನಂ.

ಈ ಸಿನಿಮಾ ಪೂರ್ವ ತಯಾರಿ ಹಂತದಲ್ಲಿದ್ದು, ಅನೇಕ ಖ್ಯಾತ ನಟ ನಟಿಯರು ಈ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ. ವಿಕ್ರಮ್, ಜಯಂ ರವಿ, ಕೀರ್ತಿ ಸುರೇಶ್, ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ನಟಿಸುತ್ತಿದ್ದಾರೆ.

ಭಾರಿ ಕುತೂಹಲ ಮೂಡಿಸಿರುವ ಈ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್ ಅವರು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ಅವರು ನಂದಿನಿ ಹಾಗೂ ನಂದಿನಿಯ ತಾಯಿ ಮಂದಾಕಿನಿ ದೇವಿಯಾಗಿ ಮೂಕಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮತ್ತೆ ನಿರ್ದೇಶನಕ್ಕಿಳಿದ ಮಣಿರತ್ನಂ; ಐಶ್ವರ್ಯ, ವಿಕ್ರಮ್ ನಟನೆ

ಈ ಚಿತ್ರದ ಮುಹೂರ್ತವು ನವೆಂಬರ್‌ನಲ್ಲಿ ನಡೆಯಲಿದೆ. ಟಾಲಿವುಡ್ ನಟ ಮೋಹನ್ ಬಾಬು ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.