ಶುಕ್ರವಾರ, ಸೆಪ್ಟೆಂಬರ್ 18, 2020
28 °C

ಬೋನಿಕಪೂರ್‌ ಚಿತ್ರದಲ್ಲಿ ಅಜಿತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಪಿಂಕ್‌’ ಚಿತ್ರದ ತಮಿಳು ರಿಮೇಕ್‌ ‘ನೇರ್ಕೊಂಡ ಪಾರ್ವೈ’ ಬಿಡುಗಡೆ ನಂತರ ನಟ ಅಜಿತ್‌ ಯಾವ ಸಿನಿಮಾಕ್ಕೂ ಸಹಿ ಮಾಡಿರಲಿಲ್ಲ. ಅಭಿಮಾನಿಗಳು ಹಾಗೂ ಸಿನಿಪ್ರಿಯರು ಅವರ ಮುಂದಿನ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಈಗ ಅಜಿತ್‌ ಅವರ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಈ ಸಿನಿಮಾವನ್ನೂ ಬೋನಿ ಕಪೂರ್‌ ನಿರ್ಮಾಣ ಮಾಡುತ್ತಿರುವುದು ವಿಶೇಷ. ಇದು ಆ್ಯಕ್ಷನ್‌ ಚಿತ್ರ ಎನ್ನಲಾಗಿದೆ.

ಈ ಚಿತ್ರಕ್ಕೆ ಇನ್ನೂ ಟೈಟಲ್‌ ಇಟ್ಟಿಲ್ಲ. ಹಾಗೇ ಈ ಸಿನಿಮಾದಲ್ಲಿ ಯಾರು ನಟಿಸಲಿದ್ದಾರೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ.  ಬೋನಿಕಪೂರ್‌ ಮನೆಯಲ್ಲಿಯೇ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರ 2020ರ ಮೇ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅಜಿತ್‌ ಪೊಲೀಸ್‌ ಅಧಿಕಾರಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಇದೆ.

ಇತ್ತೀಚೆಗೆ ವಿಮಾನನಿಲ್ದಾಣದಲ್ಲಿ ಅಜಿತ್‌ ಕೂದಲು ಕಪ್ಪಗಾಗಿಸಿಕೊಂಡು ಹೊಸ ರೂಪದಲ್ಲಿ ಕಾಣಿಸಿಕೊಂಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು