ನಟ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗಿತ್ತು. ಇದೀಗ ಈ ಸಿನಿಮಾ ಮೊದಲ ದಿನವೇ ದೊಡ್ಡ ಮಟ್ಟದಲ್ಲಿ ಗಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ಎಷ್ಟಾಗಲಿದೆ ಎಂದು ಕುತೂಹಲ ಮನೆಮಾಡಿದೆ.
.ಅಖಂಡ 2 ಸಿನಿಮಾ ಬಿಡುಗಡೆ: ಬಾಲಯ್ಯ ನಟನೆಗೆ ಪ್ರೇಕ್ಷಕರು ಫುಲ್ ಫಿದಾ.ಕನ್ನಡವೇ ಸಚ್ಚ, ಕನ್ನಡವೇ ನಿಚ್ಚ: ಕನ್ನಡ ಹೊಗಳುವ ಬರದಲ್ಲಿ ನಟ ಬಾಲಯ್ಯ ಎಡವಟ್ಟು .
ಅಂದುಕೊಂಡಂತೆ ಅಖಂಡ 2 ಸಿನಿಮಾ ಡಿಸೆಂಬರ್ 5ರಂದು ಬಿಡುಗಡೆ ಆಗಬೇಕಾಗಿತ್ತು. ಆದರೆ ಕೆಲವು ಕಾರಣಗಳಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿತ್ತು. ಹೀಗಾಗಿ ಬೆಂಗಳೂರು ಸೇರಿದಂತೆ ಹಲವು ದೇಶದಾದ್ಯಂತ ಡಿಸೆಂಬರ್ 11ರ ರಾತ್ರಿ ಸಿನಿಮಾದ ಪ್ರೀಮಿಯರ್ ಶೋ ನಡೆದಿತ್ತು. ಇದೀಗ ತಡವಾಗಿ ರಿಲೀಸ್ ಆದರೂ ಕೂಡ ಅಖಂಡ 2 ಸಿನಿಮಾ ಮೊದಲ ದಿನವೇ 59.5 ಕೋಟಿ ಗಳಿಕೆ ಮಾಡಿದೆ.

ಈ ಕುರಿತು ನಿರ್ಮಾಣ ಸಂಸ್ಥೆ 14 ರೀಲ್ಸ್ ಪ್ಲಸ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಇನ್ನು, ಈ ಸಿನಿಮಾದಲ್ಲಿ ಬಾಲಯ್ಯ ಅವರು ಉಗ್ರನಾಗಾ ಸಾಧುವಿನ ಪಾತ್ರದಲ್ಲಿ ಕಾಣಿಸಿಕೊಂಡು ತೆರೆ ಮೇಲೆ ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಬಾಲಯ್ಯ ಅವರ ನಟನೆ ಕಂಡು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ.

ನಟ ನಂದಮೂರಿ ಬಾಲಕೃಷ್ಣ ಅಭಿನಯದ ಈ ಸಿನಿಮಾ 2021ರಲ್ಲಿ ತೆರೆಕಂಡ ಅಖಂಡ ಸಿನಿಮಾದ ಸೀಕ್ವೆಲ್. ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಕಂಡಿದೆ. ಬೊಯಪಾಟಿ ಶ್ರೀನು ಹಾಗೂ ಬಾಲಕೃಷ್ಣ ಕಾಂಬಿನೇಷನ್ನ 4ನೇ ಸಿನಿಮಾ ಇದಾಗಿದೆ. 14 ರೀಲ್ಸ್ ಪ್ಲಸ್ ಬ್ಯಾನರ್ ಅಡಿಯಲ್ಲಿ ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾಗೆ ಎಸ್. ಥಮನ್ ಸಂಗೀತ ನಿರ್ದೇಶನ, ಸಿ.ರಾಮಪ್ರಸಾದ್, ಸಂತೋಷ್ ಡಿ.ಡೆಟಕೆ ಛಾಯಾಚಿತ್ರಗ್ರಹಣ, ಎ.ಎಸ್ ಪ್ರಕಾಶ್ ಕಲಾ ನಿರ್ದೇಶನ, ತಮ್ಮಿರಾಜು ಸಂಕಲನ, ರಾಮ್-ಲಕ್ಷ್ಮಣ್ ಸಾಹಸ ನಿರ್ದೇಶನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.