ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Kaumudi Movie | ‘ಕೌಮುದಿ’ಯಲ್ಲಿ ಅಕ್ಷತಾ ಪಾಂಡವಪುರ

Published 24 ಮೇ 2024, 0:59 IST
Last Updated 24 ಮೇ 2024, 0:59 IST
ಅಕ್ಷರ ಗಾತ್ರ

ನಟಿ ಅಕ್ಷತಾ ಪಾಂಡವಪುರ ಮುಖ್ಯಭೂಮಿಕೆಯಲ್ಲಿರುವ ‘ಕೌಮುದಿ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ‘ಕಂದೀಲು’ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಯಶೋದ ಪ್ರಕಾಶ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಲಾತ್ಮಕ ಚಿತ್ರ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ಯಶೋದ ಅವರಿಗೆ ಇದು ಮೂರನೇ ಚಿತ್ರವಾಗಿದ್ದು, ತಮ್ಮದೇ ಸ್ವಸ್ತಿಕ್‌ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ಬಂಡವಾಳವನ್ನು ಹೂಡುತ್ತಿದ್ದಾರೆ.

‘ಶಿಕ್ಷಣ ಹಾಗೂ ವೈಜ್ಞಾನಿಕ ಜ್ಞಾನದ ಕೊರತೆಯಿಂದಾಗಿ ಮೂಲನಂಬಿಕೆ, ಮೂಢನಂಬಿಕೆಯ ವ್ಯತ್ಯಾಸ ತಿಳಿಯದೆ ಬದುಕಿಗೆ ಅಪಾಯ ತಂದೊಡ್ಡುವ ಸಂಪ್ರದಾಯ, ಆಚರಣೆಗಳ ಸತ್ಯ-ವಾಸ್ತವಗಳ ಸುತ್ತ ಸಿನಿಮಾವು ಬೆಳಕು ಚೆಲ್ಲಲಿದೆ. ಗತಕಾಲದಿಂದ ಇಂದಿನವರೆಗೂ ಗ್ರಾಮೀಣ ಭಾಗದಲ್ಲಿ ಇಂತಹ ಪದ್ದತಿಗಳನ್ನು ಅನುಸರಿಸುತ್ತಿದ್ದಾರೆ. ಕಥಾನಾಯಕಿ ಇದರ ವಿರುದ್ದ ಧ್ವನಿ ಎತ್ತಿ, ಯಾವ ರೀತಿ ಹೋರಾಟ ಮಾಡುತ್ತಾಳೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು ನಿರ್ದೇಶಕಿ ಯಶೋದ.

ಕುಮಾರಿ ದೀಪಿಕಾ, ಪ್ರತೀಕ, ಅಂಕಿತಾಮೂರ್ತಿ, ನೀನಾಸಂ ನಟರಾಜ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶ್ರೀಸುರೇಶ್ ಸಂಗೀತ, ಪಿ.ವಿ.ಆರ್.ಸ್ವಾಮಿ ಗೂಗಾರೆದೊಡ್ಡಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಕನಕಪುರ ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣವನ್ನು ಮುಗಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT