ಮಂಗಳವಾರ, ಆಗಸ್ಟ್ 9, 2022
20 °C

ಬೆಲ್ ಬಾಟಂ: ಚಿತ್ರ ಬಿಡುಗಡೆಯ ಹೊಸ ದಿನಾಂಕ ಪ್ರಕಟಿಸಿದ ಅಕ್ಷಯ್ ಕುಮಾರ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

DH File

ಬೆಂಗಳೂರು: ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬೆಲ್ ಬಾಟಂ ಚಿತ್ರ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.

ಜುಲೈ 27ರಂದು ಬೆಲ್ ಬಾಟಂ ಸಿನಿಮಾ ಬಿಡುಗಡೆಯಾಗುತ್ತಿದ್ದು, ಈ ಬಗ್ಗೆ ನಟ ಅಕ್ಷಯ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಹೊಸ ದಿನಾಂಕದ ಜತೆಗೆ ಕಿರು ಟೀಸರ್ ವಿಡಿಯೋ ಒಂದನ್ನು ಕೂಡ ಅಕ್ಷಯ್ ಪೋಸ್ಟ್ ಮಾಡಿದ್ದು, ನೀವು ಬಹುದಿನಗಳಿಂದ ತಾಳ್ಮೆಯಿಂದ ಕಾಯುತ್ತಿರುವ ಚಿತ್ರ ಬಿಡುಗಡೆಗೆ ದಿನ ನಿಗದಿಯಾಗಿದೆ ಎಂದು ಹೇಳಿದ್ದಾರೆ.

ಅಕ್ಷಯ್ ಕುಮಾರ್ ನಾಯಕನಾಗಿ ಕಾಣಿಸಿಕೊಂಡಿದ್ದರೆ, ನಟಿ ವಾಣಿ ಕಪೂರ್ ನಾಯಕಿಯಾಗಿದ್ದಾರೆ. ಉಳಿದಂತೆ ಹುಮಾ ಖುರೇಷಿ ಮತ್ತು ಲಾರಾ ದತ್ತಾ ಕೂಡ ಬೆಲ್ ಬಾಟಂ ಚಿತ್ರದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ.

ಈ ಮೊದಲು ಏಪ್ರಿಲ್ 2ರಂದು ಬೆಲ್ ಬಾಟಂ ಚಿತ್ರ ಬಿಡುಗಡೆಗೆ ದಿನ ನಿಗದಿಪಡಿಸಲಾಗಿತ್ತು. ಆದರೆ ಲಾಕ್‌ಡೌನ್ ಕಾರಣಗಳಿಂದ ಚಿತ್ರ ಬಿಡುಗಡೆ ಮುಂದೂಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು