ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು

Last Updated 5 ಏಪ್ರಿಲ್ 2021, 5:25 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌–19 ಸೋಂಕು ತಗುಲಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯಕೀಯ ಸಲಹೆ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ, ಟ್ವಿಟರ್‌ಗಳಲ್ಲಿ ಸಂದೇಶ ಪ್ರಕಟಿಸಿದ್ದಾರೆ.

‘ನಿಮ್ಮೆಲ್ಲರ ಹಾರೈಕೆ, ಪ್ರಾರ್ಥನೆಗಳು ಕೆಲಸಮಾಡಿರುವಂತೆ ಕಾಣುತ್ತಿದ್ದು, ಅದಕ್ಕಾಗಿ ಧನ್ಯವಾದಗಳು. ನಾನು ಚೆನ್ನಾಗಿದ್ದೇನೆ. ಆದರೆ ವೈದ್ಯಕೀಯ ಸಲಹೆ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸದ್ಯದಲ್ಲೇ ಮನೆಗೆ ಮರಳಲಿದ್ದೇನೆ’ ಎಂದು ಅಕ್ಷಯ್ ಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಕ್ಷಯ್ ಕುಮಾರ್ ವರಿಗೆ ಕೋವಿಡ್ ಸೋಂಕು ತಗುಲಿರುವುದು ಭಾನುವಾರ ಬೆಳಿಗ್ಗೆ ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT