ಮಂಗಳವಾರ, ಸೆಪ್ಟೆಂಬರ್ 28, 2021
24 °C

ಅಮ್ಮ ನನಗೆ ಹುಟ್ಟುಹಬ್ಬದ ಶುಭ ಕೋರುತ್ತಿದ್ದಾಳೆ: ಅಕ್ಷಯ್ ಕುಮಾರ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Akshay Kumar Twitter

ಬೆಂಗಳೂರು: ಬಾಲಿವುಡ್‌ನ ಪ್ರಸಿದ್ಧ ನಟ ಅಕ್ಷಯ್ ಕುಮಾರ್, ಗುರುವಾರ ಸೆ. ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಹುಟ್ಟುಹಬ್ಬಕ್ಕೆ ಒಂದು ದಿನವಿರುವಾಗಲೇ ತಾಯಿ ಅರುಣಾ ಭಾಟಿಯಾ ಅವರನ್ನು ಕಳೆದುಕೊಂಡಿರುವ ಅಕ್ಷಯ್ ಕುಮಾರ್, ತಾಯಿಯ ಕುರಿತು ಸಾಮಾಜಿಕ ತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಹೀಗಾಗಬಾರದಿತ್ತು, ಆದರೆ ಅಮ್ಮ ನನಗಾಗಿ ಅಲ್ಲಿಂದ ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ಈ ಸಂದರ್ಭದಲ್ಲಿ ನನ್ನ ಜೊತೆಗಿದ್ದ ಮತ್ತು ಸಾಂತ್ವನ ಹೇಳಿದ ಎಲ್ಲರಿಗೂ ಧನ್ಯವಾದಗಳು, ಜೀವನ ಸಾಗುತ್ತಿದೆ ಎಂದು ಅಕ್ಷಯ್ ಕುಮಾರ್ ಅಮ್ಮನನ್ನು ನೆನೆಸಿಕೊಂಡು ಪೋಸ್ಟ್ ಮಾಡಿದ್ದಾರೆ.

ಮುಂಬೈನ ಹಿರಾನಂದಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ, ಬುಧವಾರ ಬೆಳಗ್ಗೆ ನಿಧನರಾಗಿದ್ದರು.

ಅಮ್ಮನನ್ನು ಕಳೆದುಕೊಂಡಿರುವುದಕ್ಕೆ ಅಕ್ಷಯ್ ಕುಮಾರ್ ತೀವ್ರ ದುಃಖಕ್ಕೊಳಗಾಗಿದ್ದು, ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಭಾವನೆಯನ್ನು ಹಂಚಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು