ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿವುಡ್ ನಟ ಅಕ್ಷಯ್ ಕುಮಾರ್‌ಗೆ ಕೋವಿಡ್–19 ದೃಢ

Last Updated 4 ಏಪ್ರಿಲ್ 2021, 5:08 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್‌ಗೆ ಕೋವಿಡ್–19 ಸೊಂಕು ದೃಢಪಟ್ಟಿದೆ. ಈ ಕುರಿತು ಭಾನುವಾರ ಬೆಳಿಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

‘ಇಂದು ಬೆಳಿಗ್ಗೆ ನನಗೆ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ಎಲ್ಲರಿಗೂ ಈ ಮೂಲಕ ತಿಳಿಸುತ್ತಿದ್ದೇನೆ. ಕೋವಿಡ್ ಮಾರ್ಗಸೂಚಿ ಪ್ರಕಾರ ತಕ್ಷಣವೇ ಪ್ರತ್ಯೇಕ ವಾಸ ಆರಂಭಿಸಿದ್ದೇನೆ. ಸದ್ಯ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿ ಇದ್ದು ವೈದ್ಯಕೀಯ ಆರೈಕೆ ಕೋರಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ. ಶೀಘ್ರದಲ್ಲೇ ಕರ್ತವ್ಯಕ್ಕೆ ಮರಳಲಿದ್ದೇನೆ’ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಾಲಿವುಡ್‌ ನಟರಾದ ರಣಬೀರ್ ಕಪೂರ್, ಆಲಿಯಾ ಭಟ್, ಆದಿತ್ಯ ನಾರಾಯಣ್, ರೂಪಾಲಿ ಗಂಗೂಲಿ, ಕಾರ್ತಿಕ್ ಆರ್ಯನ್ ಹಾಗೂ ಅಮೀರ್ ಖಾನ್ ಅವರಿಗೂ ಇತ್ತೀಚೆಗೆ ಕೋವಿಡ್ ಸೋಂಕು ತಗುಲಿತ್ತು.

ಶನಿವಾರ ಮಹಾರಾಷ್ಟ್ರದಲ್ಲಿ 49,447 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಮುಂಬೈ ನಗರವೊಂದರಲ್ಲೇ 9,090 ಪ್ರಕರಣಗಳು ವರದಿಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT