ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲುಗಿನ ‘ಕಣ್ಣಪ್ಪ’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌!

Published 16 ಏಪ್ರಿಲ್ 2024, 11:02 IST
Last Updated 16 ಏಪ್ರಿಲ್ 2024, 11:02 IST
ಅಕ್ಷರ ಗಾತ್ರ

ಹೈದರಾಬಾದ್‌: ನಟ ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ‘ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಕಾಣಿಸಿಕೊಳ್ಳುವ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿಷ್ಣು ಮಂಚು, ‘ಕಣ್ಣಪ್ಪ' ಚಿತ್ರವು ಮತ್ತಷ್ಟು ರೋಮಾಂಚನಕಾರಿಯಾಗಿ ತೆರೆ ಮೇಲೆ ಮೂಡಿಬರಲಿದೆ . ಚಿತ್ರದಲ್ಲಿ ಸಾಹಸಮಯ ದೃಶ್ಯಗಳು ಇರಲಿವೆ' ಎಂದು ಹೇಳುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.

'ಕಣ್ಣ‍ಪ್ಪ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ನನಗೆ ಸಂತೋಷವಾಗಿದೆ ಹಾಗೂ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವುದು ಸಂತಸ ತಂದಿದೆ' ಎಂದು ನಟ ಅಕ್ಷಯ್‌ ಕುಮಾರ್‌ 'ಎಕ್ಸ್‌'ನಲ್ಲಿ ಬರೆದುಕೊಂಡಿದ್ದಾರೆ.

ನೈಜ ಕಥೆ ಆಧರಿತ ಈ ಚಿತ್ರವು ಶಿವನ ಭಕ್ತ ಕಣ್ಣಪ್ಪನ ಪಯಣದ ಅನುಭವವನ್ನುಬಕಟ್ಟಿಕೊಡಲಿದೆ

‘ಕಣ್ಣಪ್ಪ‘ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶಿಸಿದ್ದಾರೆ. ಮಂಚು ಅವರ ಬ್ಯಾನರ್‌ಗಳಾದ ಎವಿಎ ಎಂಟರ್‌ಟೈನ್‌ಮೆಂಟ್ ಮತ್ತು 24 ಪ್ರೇಮ್ಸ್ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಮುಕುಂದನ್, ಮೋಹನ್ ಲಾಲ್, ಪ್ರಭಾಸ್, ಮೋಹನ್ ಬಾಬು, ಆರ್. ಶರತ್‌ ಕುಮಾರ್, ಬ್ರಹ್ಮಾನಂದಂ, ಸೇರಿದಂತೆ ಮುಖೇಶ್ ರಿಷಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರವು ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್‌ಗಳಲ್ಲಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT