ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೂರರೈ ಪೊಟ್ರು’ ಹಿಂದಿ ರಿಮೇಕ್‌ನ ಮುಖ್ಯ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟನೆ

Last Updated 30 ಜನವರಿ 2022, 8:23 IST
ಅಕ್ಷರ ಗಾತ್ರ

ಮುಂಬೈ: ತಮಿಳಿನ ಸೂಪರ್‌ ಹಿಟ್‌ ‘ಸೂರರೈ ಪೊಟ್ರು’ ಸಿನಿಮಾದ ಹಿಂದಿ ರಿಮೇಕ್‌ನಲ್ಲಿ ನಟ ಅಕ್ಷಯ್‌ ಕುಮಾರ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಕ್ಷಯ್ ಕುಮಾರ್ ಸೇರಿದಂತೆ ಸ್ಟಾರ್‌ ನಟರಾದ ಅಜಯ್ ದೇವಗನ್, ಹೃತಿಕ್ ರೋಷನ್, ಜಾನ್ ಅಬ್ರಹಾಂ ಅವರಲ್ಲಿ ಒಬ್ಬರು ‘ಸೂರರೈ ಪೊಟ್ರು’ ಸಿನಿಮಾದ ಪ್ರಮುಖ ಪಾತ್ರ ನಿರ್ವಹಿಸುವ ಬಗ್ಗೆ ಮಾತುಗಳು ಕೇಳಿಬಂದಿದ್ದವು.

ಇತ್ತೀಚಿನ ವರದಿಗಳ ಪ್ರಕಾರ, ನಾಯಕನಾಗಿ ಅಕ್ಷಯ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಚಿತ್ರದಲ್ಲಿ ಅಭಿನಯಿಸುವ ಬಗ್ಗೆ ಅಕ್ಷಯ್‌, ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದರು. ಈ ಹಿಂದೆ ಮೌಖಿಕವಾಗಿ ಒಪ್ಪಿಗೆ ಸೂಚಿಸಿದ್ದ ಅವರು, ಇದೀಗ ಅಧಿಕೃತವಾಗಿ ಸಹಿ ಮಾಡಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್‌ ಅವರ ಜೀವನಚರಿತ್ರೆ ಕುರಿತ ‘ಸೂರರೈ ಪೊಟ್ರು’ ಚಿತ್ರವನ್ನು ಸುಧಾ ಕೊಂಗಾರ ನಿರ್ದೇಶಿಸಿದ್ದಾರೆ. ತಮಿಳು ನಟ ಸೂರ್ಯ ಅಭಿನಯಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಗೋಪಿನಾಥ್ ಕನ್ನಡ ಮಾಧ್ಯಮದಲ್ಲಿಯೇ ವಿದ್ಯಾಭ್ಯಾಸ ಮಾಡಿ ಸೇನೆಗೆ ಸೇರಿ ‘ಕ್ಯಾಪ್ಟನ್ ಗೋಪಿನಾಥ್’ ಆಗುತ್ತಾರೆ. ಬಳಿಕ ಸೇನೆಯಿಂದ ವಾಪಸ್‌ ಬಂದು ಏರ್ ಡೆಕ್ಕನ್ ವಿಮಾನಯಾನ ಸಂಸ್ಥೆ ಆರಂಭಿಸುತ್ತಾರೆ. ಕಡಿಮೆ ವೆಚ್ಚದಲ್ಲಿ ವಿಮಾನಯಾನ ಎಂಬ ಹೊಸ ಪರಿಕಲ್ಪನೆ ಹುಟ್ಟುಹಾಕಿದ್ದು ಅವರ ಹಿರಿಮೆ. ಅವರ ಜೀವನಚರಿತ್ರೆ ಕುರಿತ ಈ ಚಿತ್ರದಲ್ಲಿ ಗೋಪಿನಾಥ್ ಪಾತ್ರಕ್ಕೆ ಸೂರ್ಯ ಬಣ್ಣ ಹಚ್ಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT