ಮಂಗಳವಾರ, ಅಕ್ಟೋಬರ್ 27, 2020
22 °C

ತೆಲುಗು ಕಲಿಯುತ್ತಿದ್ದಾರಾ ಆಲಿಯಾ ಭಟ್‌?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್ ಬೆಡಗಿ ಆಲಿಯಾ ಭಟ್‌ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸೆಟ್‌ಗೆ ಸದ್ಯದಲ್ಲೇ ಎಂಟ್ರಿ ಕೊಡಲಿದ್ದಾರೆ. ಬಹುನಿರೀಕ್ಷಿತ ಸಿನಿಮಾ ಸೆಟ್‌ಗೆ ನವೆಂಬರ್‌ ಮೊದಲ ವಾರದಲ್ಲಿ ಸೇರಿಕೊಳ್ಳಲಿದ್ದಾರೆ ಆಲಿಯಾ. ಜ್ಯೂನಿಯರ್ ಎನ್‌ಟಿಆರ್‌, ರಾಮ್‌ಚರಣ್‌ ತೇಜ ನಾಯಕರಾಗಿ ನಟಿಸುತ್ತಿರುವ ಈ ಚಿತ್ರ ಕಳೆದ ಒಂದು ವರ್ಷದಿಂದ ತಯಾರಾಗುತ್ತಿದೆ. ಈ ಸಿನಿಮಾದಲ್ಲಿ ಎನ್‌ಟಿಆರ್ ಹಾಗೂ ರಾಮ್‌ ಸ್ವಾತಂತ್ರ ಹೋರಾಟಗಾರರಾದ ಅಲ್ಲುರಿ ಸೀತಾರಾಮರಾಜು ಹಾಗೂ ಕೋಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಾರ್ಚ್‌ನಲ್ಲಿ ಆಲಿಯಾ ಆರ್‌ಆರ್‌ಆರ್‌ ಶೂಟಿಂಗ್‌ನಲ್ಲಿ ಭಾಗವಹಿಸಬೇಕಿತ್ತು. ಆದರೆ ಲಾಕ್‌ಡೌನ್ ಕಾರಣದಿಂದ ಶೂಟಿಂಗ್ ಮುಂದಕ್ಕೆ ಹಾಕಲಾಗಿತ್ತು. ಈಗ ಆಕೆ ಮತ್ತೆ ಡೇಟ್ ನೀಡಿದ್ದಾರೆ.

ಸದ್ಯದ ಸುದ್ದಿಯ ಪ್ರಕಾರ ಆಲಿಯಾ ತೆಲುಗು ಕಲಿಯುತ್ತಿದ್ದಾರಂತೆ. ಅಲ್ಲದೇ ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಲಿದ್ದಾರಂತೆ. ಈಗಲೂ ಅನೇಕ ನಟ–ನಟಿಯರು ಹಲವು ಸಿನಿಮಾಗಳಲ್ಲಿ ನಟಿಸಿದ್ದರೂ ಡಬ್‌ ಮಾಡಲು ಹಿಂಜರಿಯುತ್ತಾರೆ. ಆದರೆ ತಮ್ಮ ಮೊದಲ ಸಿನಿಮಾದಲ್ಲಿ ಆಲಿಯಾ ಡಬ್‌ ಮಾಡಲು ಯೋಚಿಸಿರುವುದು ಖುಷಿಯ ವಿಚಾರ. ತೆಲುಗು ಕಲಿಯುವ ಸಲುವಾಗಿಯೇ ಅವರು ತರಬೇತುದಾರರನ್ನು ನೇಮಿಸಿಕೊಂಡಿದ್ದಾರಂತೆ. ಈ ಸುದ್ದಿಯ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ಕಾದು ನೋಡಬೇಕಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು