ಶುಕ್ರವಾರ, ಮೇ 27, 2022
26 °C

ಬ್ರಹ್ಮಾಸ್ತ್ರ: ಕನ್ನಡದಲ್ಲಿ ಟ್ವೀಟ್ ಮಾಡಿದ ನಟಿ ಆಲಿಯಾ ಭಟ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಲಿವುಡ್‌ನ ತಾರಾ ಜೋಡಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ‘ಬ್ರಹ್ಮಾಸ್ತ್ರ ಪಾರ್ಟ್ ಒನ್’ ಸೆಪ್ಟೆಂಬರ್ 9, 2022ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾಷೆಗಳಾದ ಕನ್ನಡ, ತೆಲುಗು, ಮಲಯಾಳಂ, ತಮಿಳು ಭಾಷೆಗಳಲ್ಲೂ ಚಿತ್ರ ಬಿಡುಗಡೆ ಆಗಲಿದೆ.

ಈ ಹಿನ್ನೆಲೆಯಲ್ಲಿ ಚಿತ್ರದ ಪ್ರಮೋಶನ್‌ಗಾಗಿ ನಟಿ ಆಲಿಯಾ ಭಟ್ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

09.09.2022 ಈ 🔥ದಿನಾಂಕದೊಂದಿಗೆ ಬ್ರಹ್ಮಾಸ್ತ್ರ ಪಾರ್ಟ್ ಒನ್: ಶಿವನನ್ನು ನೀವು ತಪ್ಪಿಸಿಕೊಳ್ಳುವಂತಿಲ್ಲ ! ಬ್ರಹ್ಮಾಂಡದಲ್ಲಿ ಮಹಾಶಕ್ತಿಶಾಲಿಯಾದ ಅಸ್ತ್ರವೊಂದು ಉದ್ಭವಿಸಲಿದೆ
ಮಹಾಯೋಧನೊಬ್ಬನ ಉದಯವಾಗಲಿದೆ. ಶಿವನನ್ನು ಪರಿಚಯಿಸುತ್ತಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚಿತ್ರವನ್ನು ಅಯನ್ ಮುಖರ್ಜಿ ನಿರ್ದೇಶಿಸಿದ್ದು, ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಚಿತ್ರಗಳನ್ನು ಖ್ಯಾತ ನಿರ್ದೇಶಕ ರಾಜಮೌಳಿ ಪ್ರಸ್ತುತಪಡಿಸುತ್ತಿದ್ದಾರೆ.

ಚಿತ್ರದಲ್ಲಿ ಬಿಗ್‌ ಬಿ ಅಮಿತಾಬ್ ಬಚ್ಚನ್, ತೆಲುಗಿನ ಸೂಪರ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ, ಮೌನಿ ರಾಯ್ ಸೇರಿದಂತೆ ಹಲವು ಖ್ಯಾತನಾಮರ ತಾರಾಗಣವಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು