ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ವರ್ಷದ ಬಳಿಕ ಕೊನೆಗೂ ಬ್ರಹ್ಮಾಸ್ತ್ರ ಶೂಟಿಂಗ್ ಮುಗಿಸಿದ ಆಲಿಯಾ–ರಣಬೀರ್

Last Updated 29 ಮಾರ್ಚ್ 2022, 10:14 IST
ಅಕ್ಷರ ಗಾತ್ರ

ಬೆಂಗಳೂರು: ಅಯಾನ್ ಮುಖರ್ಜಿ ನಿರ್ದೇಶನದ ‘ಬ್ರಹ್ಮಾಸ್ತ್ರ’ ಸಿನಿಮಾದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದೆ.

ಈ ಚಿತ್ರದಲ್ಲಿ ಬಾಲಿವುಡ್‌ನ ಪ್ರೇಮಪಕ್ಷಿಗಳಾಗಿರುವ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯಿಸುತ್ತಿದ್ದಾರೆ.

2018ರಲ್ಲಿ ಬ್ರಹ್ಮಾಸ್ತ್ರ ಚಿತ್ರದ ಶೂಟಿಂಗ್ ಆರಂಭವಾಗಿದ್ದು, 2022ರಲ್ಲಿ ಮುಕ್ತಾಯವಾಗುತ್ತಿದೆ. ಐದು ವರ್ಷಗಳ ಕಾಲ ನಡೆದ ಈ ಸಿನಿಮಾ ಶೂಟಿಂಗ್ ಮುಗಿಯುತ್ತಿದೆ ಎಂದು ನಟಿ ಆಲಿಯಾ ಭಟ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚಿತ್ರ ಈ ವರ್ಷದ ಸೆಪ್ಟೆಂಬರ್‌ 9ರಂದು ಬಿಡುಗಡೆಯಾಗುತ್ತಿದೆ. ಅಲ್ಲದೆ, ಬ್ರಹ್ಮಾಸ್ತ್ರ ಚಿತ್ರದ ಮೊದಲನೇ ಭಾಗ ಇದಾಗಿದೆ ಎಂದು ಚಿತ್ರತಂಡ ಹೇಳಿದೆ.

ಬ್ರಹ್ಮಾಸ್ತ್ರ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT