ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಗುವಿಗೆ ಜನ್ಮ ನೀಡಿದ ಆಲಿಯಾ ಭಟ್: ರಣಬೀರ್ ಕಪೂರ್ ಸಂಭ್ರಮ

ರಣಬೀರ್ ಕಪೂರ್–ಆಲಿಯಾ ಭಟ್‌ ದಂಪತಿಗೆ ಹೆಣ್ಣು ಮಗು
Last Updated 6 ನವೆಂಬರ್ 2022, 8:47 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್‌ನ ಜನಪ್ರಿಯ ತಾರಾ ದಂಪತಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ.

ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಭಾನುವಾರ ಬೆಳಗ್ಗೆ 7.30ಕ್ಕೆ ಆಲಿಯಾ ಭಟ್ ಅವರು ಮುಂಬೈನ ಎಚ್‌.ಎನ್‌ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಆಲಿಯಾ ಭಟ್ ಅವರಿಗೆ ಸರ್ಜರಿ ಮೂಲಕ ಮಗು ಜನಿಸಿದೆ. ತಾಯಿ–ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಜೂನ್‌ನಲ್ಲಿ ಆಲಿಯಾ ಭಟ್ ತಾವು ಗರ್ಭಿಣಿಯಾಗಿರುವುದನ್ನು ಘೋಷಿಸಿದ್ದರು.

ಆಲಿಯಾ ಮತ್ತು ರಣಬೀರ್ ದಂಪತಿ ಮಗುವನ್ನು ಬರಮಾಡಿಕೊಂಡಿರುವುದಕ್ಕೆ ಬಾಲಿವುಡ್ ಮಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಹೆಣ್ಣು ಮಗು ಜನಿಸಿರುವ ಸಂಭ್ರಮವನ್ನು ಆಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT