ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮ್ಮನಾಗುತ್ತಿರುವ ಖುಷಿಯಲ್ಲಿ ನಟಿ ಆಲಿಯಾ ಭಟ್‌: ಬೇಬಿ ಬಂಪ್ ಫೋಟೊ ವೈರಲ್ 

ಅಕ್ಷರ ಗಾತ್ರ

ಮುಂಬೈ: ಅಮ್ಮನಾಗುವ ಖುಷಿಯಲ್ಲಿರುವ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಬೇಬಿ ಬಂಪ್ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ನಟಿಯರಾದ ಆಲಿಯಾ ಭಟ್, ಗಾಲ್ ಗ್ಯಾಡೋಟ್ ಒಟ್ಟಿಗೆ ನಟಿಸುತ್ತಿರುವ ಹಾಲಿವುಡ್‌ನ ‘ಹಾರ್ಟ್ ಆಫ್ ಸ್ಟೋನ್’ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಚಿತ್ರೀಕರಣ ಮುಗಿಸಿಕೊಂಡು ಆಲಿಯಾ ಭಾರತಕ್ಕೆ ವಾಪಸ್‌ ಆಗಿದ್ದಾರೆ.

ಈ ನಡುವೆ ಆಲಿಯಾ ಭಟ್ ಚಿತ್ರೀಕರಣದಲ್ಲಿ ತೊಡಗಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್‌ ಮತ್ತು ರಣಬೀರ್ ಕಪೂರ್ ದಂಪತಿ ಇತ್ತೀಚೆಗಷ್ಟೇ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಹೇಳಿಕೊಂಡಿದ್ದರು.

ತಾವು ಗರ್ಭಿಣಿಯಾಗಿರುವ ವಿಷಯವನ್ನು ಜೂನ್ 27ರಂದು ಸಾಮಾಜಿಕ ಮಾಧ್ಯಮದ ಮೂಲಕ ಆಲಿಯಾ ಭಟ್ ಪ್ರಕಟಿಸಿದ್ದರು.

ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದ 29 ವರ್ಷದ ನಟಿ, ‘ನಮ್ಮ ಮಗು ಸದ್ಯದಲ್ಲೇ ಬರಲಿದೆ’ ಎಂದು ಬರೆದುಕೊಂಡಿದ್ದರು.

ಸುಮಾರು ಐದು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ಈ ಜೋಡಿ ಏಪ್ರಿಲ್‌ 14, 2022ರಂದು ವಿವಾಹವಾಗಿತ್ತು.

ಇತ್ತೀಚೆಗೆ ತೆರೆಕಂಡಿದ್ದ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನ ಹಾಗೂ ಆಲಿಯಾ ಭಟ್ ಪ್ರಧಾನ ಭೂಮಿಕೆಯಲ್ಲಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಎಸ್‌.ಎಸ್‌.ರಾಜಮೌಳಿ ನಿರ್ದೇಶನದಲ್ಲಿ ಮೂಡಿಬಂದ ‘ಆರ್‌ಆರ್‌ಆರ್‌’ ಚಿತ್ರದಲ್ಲೂ ಆಲಿಯಾ ಕಾಣಿಸಿಕೊಂಡಿದ್ದರು.

ಅಯಾನ್ ಮುಖರ್ಜಿ ಆ್ಯಕ್ಷನ್ ಕಟ್ ಹೇಳಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಒಟ್ಟಿಗೆ ಅಭಿನಯಿಸಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT