ಚಿತ್ರರಂಗದಲ್ಲಿ 3 ದಶಕಗಳ ಅನುಭವ ಹೊಂದಿರುವ ನಿರ್ದೇಶಕ, ನಿರ್ಮಾಪಕ ಸೆಬಾಸ್ಟಿಯನ್ ಡೇವಿಡ್ ಇದೀಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಅಂತಾರಾಷ್ಟ್ರೀಯ ಗುಣಮಟ್ಟದ ಸಿನಿಮಾ ಸಂಬಂಧಿ ಚಟುವಟಿಕೆಗಳನ್ನು ಶುರು ಮಾಡಿದ್ದಾರೆ.

ಸೆಬಾಸ್ಟಿಯನ್ ಡೇವಿಡ್ ಕನ್ನಡದಲ್ಲಿ ಕೆಲ ವರ್ಷಗಳ ಹಿಂದಷ್ಟೇ ಬಿಡುಗಡೆ ಆಗಿದ್ದ ಜ್ಯೋತಿ ಅಲಿಯಾಸ್ ಕೋತಿರಾಜ್ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಇದಷ್ಟೇ ಅಲ್ಲ ಆರ್ ಟಿನಗರ ಮತ್ತು ಗಾಂಧಿನಗರದಲ್ಲಿ ಸ್ಟುಡಿಯೋ ನಡೆಸುತ್ತಿದ್ದರು. ಅದಾದ ಬಳಿಕ ಜಾಹೀರಾತು ನಿರ್ದೇಶನದಲ್ಲಿಯೇ ಹೆಚ್ಚು ಸಕ್ರೀಯರಾಗಿ, ಟಿವಿಯಲ್ಲಿ ನೋಡುವ ಬಹುತೇಕ ಎಲ್ಲ ಚಿನ್ನದ ಜಾಹೀರಾತುಗಳನ್ನು ಸೆಬಾಸ್ಟಿಯನ್ ಅವರೇ ನಿರ್ದೇಶನ ಮಾಡಿದ್ದಾರೆ.

ಅವರು ಆಲ್‌ಫ್ಲಿಕ್ಸ್ ಎಂಟರ್ಟೈನ್ಮೆಂಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತೆರೆದಿದ್ದು, ಅದರ ಅಡಿಯಲ್ಲಿ ಓಟಿಟಿ (ಓವರ್ ದಿ ಟಾಪ್) ವೇದಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಕನ್ನಡದಲ್ಲಿ ಸದ್ಯ ಉತ್ಕೃಷ್ಟ ಮಟ್ಟದ ಓಟಿಟಿ ವೇದಿಕೆ ಇಲ್ಲದ್ದನ್ನು ಮನಗಂಡು, ಆಲ್‌ಫ್ಲಿಕ್ಸ್ (AllFlix) ಹೆಸರಿನಲ್ಲಿ ಓಟಿಟಿ ಸಿದ್ಧಪಡಿಸಿದ್ದಾರೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಒಟಿಟಿ ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಏಕಕಾಲದಲ್ಲಿ 50 ಸಾವಿರ ಜನ ಈ ಆ್ಯಪ್ ಬಳಕೆ ಮಾಡಿದರೂ ತೊಂದರೆಯಾಗದ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

ಈಗಾಗಲೇ ಈ ಒಟಿಟಿ ಸಲುವಾಗಿ ಗ್ಲಾಮರ್ವೆಬ್ಸಿರೀಸ್ ನಿರ್ಮಾಣ ಕೆಲಸವೂ ಶುರುವಾಗಿದ್ದು, ಶೀಘ್ರದಲ್ಲಿ ಶೂಟಿಂಗ್ ಸಹ ಶುರುವಾಗಲಿದೆ. ಕುರಿಬಾಂಡ್ ಸುನಿಲ್ ಆ ವೆಬ್ಸಿರೀಸ್ಮುಖ್ಯಭೂಮಿಕೆಯಲ್ಲಿ ಇರಲಿದ್ದಾರೆ. ಇದರ ನಿರ್ಮಾಣದ ಜವಾಬ್ದಾರಿ ಸೆಬಾಸ್ಟಿಯನ್ ಅವರದ್ದೇ. ಇದಷ್ಟೇ ಅಲ್ಲದೇ ಬೇರೆ ಬೇರೆ ನಿರ್ಮಾಪಕರು ವೆಬ್ಸಿರೀಸ್ ನಿರ್ಮಾಣಕ್ಕೆ ಮುಂದೆ ಬಂದಿದ್ದಾರೆ.

ಸಿನಿಮಾಕ್ಕೆ ಸಂಬಂಧಿಸಿದ ಚಟುವಟಿಕೆಗಳಾದ ಡಬ್ಬಿಂಗ್, ಎಡಿಟಿಂಗ್, ಡಿಟಿಎಸ್, ಡಿಐ, ಸಿಜಿ ಕೆಲಸ ಬಹುತೇಕ ಎಲ್ಲ ಕೆಲಸಗಳನ್ನು ಒಂದೇ ಸೂರಿನಡಿ ಸೆಬಾಸ್ಟಿಯನ್ ಡೇವಿಡ್ ಮಾಡಿಕೊಡುತ್ತಿದ್ದಾರೆ. ಇದರ ಜತೆಗೆ ಕಾರ್ಯಕ್ರಮಗಳ ನೇರ ಪ್ರಸಾರ ಕಾರ್ಯದಲ್ಲೂ ಅವರು ಸಕ್ರಿಯರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.