ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುಷ್ಪ–ದಿ ರೂಲ್ ಬಿಡುಗಡೆ ಮುಂದಕ್ಕೆ: ಅಲ್ಲು ಅಭಿಮಾನಿಗಳಿಗೆ ನಿರಾಸೆ

ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ–ದಿ ರೂಲ್ (ಪುಷ್ಪ– 2) ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ.
Published 18 ಜೂನ್ 2024, 13:47 IST
Last Updated 18 ಜೂನ್ 2024, 13:47 IST
ಅಕ್ಷರ ಗಾತ್ರ

ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ–ದಿ ರೂಲ್ (ಪುಷ್ಪ– 2) ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ.

ಹೌದು, ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿದ್ದ ಪುಷ್ಪ–ದಿ ರೂಲ್ ಇದೇ ವರ್ಷ ಡಿಸೆಂಬರ್ 6ರಂದು ಬಿಡುಗಡೆಯಾಗಲಿದೆ ಎಂದು ಚಿತ್ರನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಅಧಿಕೃತವಾಗಿ ತಿಳಿಸಿದೆ.

ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ, ಬೆಂಗಾಲಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಹೊಸ ಘೋಷಣೆಯೊಂದಿಗೆ ಅಲ್ಲು ಅರ್ಜುನ್ ಅವರ ಕೈಯಲ್ಲಿ ಹರಿತ ಆಯುಧ ಹಿಡಿದಿರುವ ಹೊಸ ಪೋಸ್ಟರ್ ಕೂಡ ಬಿಡುಗಡೆಯಾಗಿದೆ.

ಆಗಸ್ಟ್‌ನಲ್ಲಿ ಟಾಲಿವುಡ್ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳು ಬಿಡುಗಡೆಯಾಗುತ್ತಿರುವುದರಿಂದ ಮತ್ತೆ ಪುಷ್ಪ ಸಿನಿಮಾದ ನಿರ್ಮಾಣೋತ್ತರ ಕಾರ್ಯಗಳು ಇನ್ನೂ ಮುಗಿದಿಲ್ಲವಾಗಿರುವುದರಿಂದ ಬಿಡುಗಡೆ ಮುಂದಕ್ಕೆ ಹೋಗುವುದು ಬಹುತೇಕ ಖಚಿತವಾಗಿತ್ತು.

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅಭಿನಯದ ‘ಖೇಲ್‌ ಖೇಲ್‌ ಮೇ’ ಚಿತ್ರವು ಇದೇ ವರ್ಷ ಆಗಸ್ಟ್‌ 15ರಂದು ಬಿಡುಗಡೆಯಾಗಲಿದ್ದು, ಅಂದೇ ಬಿಡುಗಡೆಯಾಗಬೇಕಿದ್ದ ಪುಷ್ಪ–2 ಸಿನಿಮಾಗೆ ಪೈಪೋಟಿ ನೀಡಲಿದೆ ಎನ್ನಲಾಗಿತ್ತು. ಶೃದ್ಧಾ ಕಪೂರ್ ಪ್ರಮುಖ ಪಾತ್ರದಲ್ಲಿರುವ ಅಮರ್ ಕೌಶಿಕ್ ಅವರ ಕಾಮಿಡಿ, ಹಾರರ್ ‘ಸ್ತ್ರೀ–2’ ಸಿನಿಮಾ, ನಿಖಿಲ್ ಅಡ್ವಾಣಿ ಅವರ ವೇದ ಸಿನಿಮಾ ಆಗಸ್ಟ್‌ನಲ್ಲಿ ರಿಲೀಸ್ ಆಗಲಿವೆ.

ಪುಷ್ಪ ಚಿತ್ರವನ್ನು ಸುಕುಮಾರ್‌ ನಿರ್ದೇಶಿಸುತ್ತಿದ್ದು, ಮೈತ್ರಿ ಮೂವೀಸ್‌ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ.

ಪುಷ್ಪ-1 ಚಿತ್ರವು 2021ರ ಡಿಸೆಂಬರ್‌ನಲ್ಲಿ ತೆರೆಕಂಡಿತ್ತು. ಈ ಸಿನಿಮಾದ ಯಶಸ್ಸಿನಿಂದಾಗಿ ನಟ ಅಲ್ಲು ಅರ್ಜುನ್‌ ಅವರ ಖ್ಯಾತಿಯೂ ಮತ್ತಷ್ಟು ಹೆಚ್ಚಿತ್ತು. ರಶ್ಮಿಕಾ ಮಂದಣ್ಣ, ಪಹಾದ್ ಫಾಸಿಲ್ ಸೇರಿದಂತೆ ಹಲವರ ತಾರಾಗಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT