ದಕ್ಷಿಣ ಭಾರತದ ಪ್ರಸಿದ್ಧ ನಟ ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾದ ಶೀರ್ಷಿಕೆ ಅನಾವರಣ ಮಾಡಲಾಗಿದೆ. ಸಿನಿಮಾಗೆ ರಾಕ (Raaka) ಎಂದು ಹೆಸರಿಡಲಾಗಿದೆ. ಈ ಸಿನಿಮಾಗೆ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಇಂದು (ಏಪ್ರಿಲ್ 8) ಅಲ್ಲು ಅರ್ಜುನ್ ಅವರು 44 ವರ್ಷದ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ನಡುವೆ ಅವರ ಬಹುನಿರೀಕ್ಷಿತ ಸಿನಿಮಾದ ಹೆಸರು ಹಾಗೂ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರ ಲುಕ್ ಅನ್ನು ಅನಾವರಣ ಮಾಡಲಾಗಿದೆ. ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರಿಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೋಡಿಯಾಗಿದ್ದಾರೆ.

ಸಿನಿಮಾ ನಿರ್ಮಾಕರು ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ ಪೋಸ್ಟ್ ಒಂದನ್ನು ಹಂಚಿಕೊಂಡು, ‘#AA22xA6 ಈಗ ರಾಕ ಆಗಿದೆ, ಮಿತಿಗಳನ್ನು ಮೀರಿದ ಅನುಭವ ಪಡೆಯಲು ಸಿದ್ಧರಾಗಿ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ 4 ಲಕ್ಷಕ್ಕೂ ಅಧಿಕ ಮೆಚ್ಚುಗೆ ಮತ್ತು 8,000ಕ್ಕೂ ಅಧಿಕ ಕಾಮೆಂಟ್ಗಳನ್ನು ಪಡೆದುಕೊಂಡಿದೆ.

ಅಲ್ಲು ಅರ್ಜುನ್ ಅವರು ಪುಷ್ಪ ಭಾಗ ಒಂದು ಮತ್ತು ಪುಷ್ಪ ಭಾಗ ಎರಡು ಸಿನಿಮಾಗಳ ಮೂಲಕ ದಕ್ಷಿಣ ಭಾರತ ಮಾತ್ರವಲ್ಲದೆ, ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ, ಪುಷ್ಪ ಬಳಿಕ ದೊಡ್ಡ ಬಜೆಟ್ನ ಸಿನಿಮಾವನ್ನು ಘೋಷಣೆ ಮಾಡಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಉಂಟು ಮಾಡಿದೆ.

ಸಿನಿಮಾದ ಶೀರ್ಷಿಕೆಯ ಜೊತೆಗೆ ಅಲ್ಲು ಅರ್ಜುನ್ ಅವರ ಲುಕ್ ಅನ್ನು ಕೂಡ ಚಿತ್ರತಂಡ ಬಿಡುಗಡೆ ಮಾಡಿದರೆ. ಇದರಲ್ಲಿ ಅಲ್ಲು ಅರ್ಜುನ್ ಅವರು ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಬೋಳು ತಲೆ ಹೊಂದಿದ್ದಾರೆ. ಮೇಲ್ನೋಟಕ್ಕೆ ಇದೊಂದು ಮಾಸ್ ಸಿನಿಮಾ ಎಂಬಂತೆ ಬಾಸವಾಗುತ್ತಿದೆ. ಚಿತ್ರಕಥೆ ಏನು ಎಂಬುದರ ಕುರಿತು ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.