ಹೈದರಾಬಾದ್: ತೆಲುಗು ನಟ ಅಲ್ಲು ಅರ್ಜುನ್ ಅವರ ವಿರುದ್ಧ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾಡಿದ ಆರೋಪದ ಬೆನ್ನಲ್ಲೇ, ತಮ್ಮ ಅಭಿಮಾನಿಗಳಿಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ನಟ ಅಲ್ಲು ಅರ್ಜುನ್ ಮನವಿ ಮಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮ್ಮ ಅಭಿಮಾನಿಗಳು ಈ ಸಮಯದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಯಾರ ಬಗ್ಗೆಯೂ ವೈಯಕ್ತಿಕವಾಗಿ ನಿಂದಿಸಬಾರದು ಎಂದು ತಿಳಿಸಿದ್ದಾರೆ.
.ಕೊಲೆಯಾದ ವ್ಯಕ್ತಿ ಹಿಂದೂ ಅರ್ಚಕ ಅಲ್ಲ: ಬಾಂಗ್ಲಾ ಸರ್ಕಾರ.ಗಾಜಾ ಪಟ್ಟಿ: ಇಸ್ರೇಲ್ ಸೇನೆ ದಾಳಿಗೆ 20 ಜನರ ಸಾವು.
ಅಭಿಮಾನಿಗಳು ತಮ್ಮ ಭಾವನೆಗಳನ್ನು ಜವಾಬ್ದಾರಿಯುತವಾಗಿ ವ್ಯಕ್ತಪಡಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಎಲ್ಲಿಯೂ ಬೇರೆಯವರ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆಗಳನ್ನು ನೀಡಬೇಡಿ ಎಂದು ಸೂಚಿಸಿದ್ದಾರೆ.

ನಕಲಿ ಐಡಿ ಮತ್ತು ಖಾತೆಗಳ ಮೂಲಕ ತಮ್ಮ ಅಭಿಮಾನಿಯಂತೆ ಬಿಂಬಿಸಿ, ಸುಳ್ಳು ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ವಿಷಯ ಗಮನಕ್ಕೆ ಬಂದಿದ್ದು, ಇಂತಹ ನಕಲಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.
.ಪೆಗಾಸಸ್: ‘ಸುಪ್ರೀಂ’ ತನಿಖೆ ನಡೆಸುವುದೇ?; ಸುರ್ಜೇವಾಲಾ .INDW vs WIW: ರೇಣುಕಾಗೆ 5 ವಿಕೆಟ್, ವಿಂಡೀಸ್ ವಿರುದ್ಧ ಭಾರತಕ್ಕೆ 211 ರನ್ ಜಯ.
ಪೊಲೀಸರು ಅನುಮತಿ ನಿರಾಕರಿಸಿದರೂ ಚಿತ್ರ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್ಗೆ ಭೇಟಿ ನೀಡಿದ್ದರು ಎಂದು ಇತ್ತೀಚೆಗೆ ರೇವಂತ್ ರೆಡ್ಡಿ ಆರೋಪಿಸಿದ್ದರು. ಆದರೆ ಅಲ್ಲು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

'ಪುಷ್ಪ-2' ಚಿತ್ರದ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
.ಭಾರತ ವಿರುದ್ಧ ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟ; ಮರಳಿದ ಕೆಮರ್ ರೋಚ್.ಪುಷ್ಪ–2 ಕಾಲ್ತುಳಿತ: ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ:DGP.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.