ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಭಿನಂದನೆ ಆಲಿಯಾ ಎಂದ ಅಲ್ಲು ಅರ್ಜುನ್‌

Published 27 ಆಗಸ್ಟ್ 2023, 13:11 IST
Last Updated 27 ಆಗಸ್ಟ್ 2023, 13:11 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್‌ ನಟಿ ಆಲಿಯಾ ಭಟ್‌ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ‍ಪಡೆದುಕೊಂಡಿರುವುದಕ್ಕೆ ನಟ ಅಲ್ಲು ಅರ್ಜುನ್‌ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಲ್ಲು ಅರ್ಜುನ್‌, ‘ಈ ಪ್ರಶಸ್ತಿ ‍ ಪಡೆದುಕೊಳ್ಳುವುದನ್ನು ನೋಡಲು ನಾನು ಕಾಯುತ್ತಿದ್ದೆ’ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಆಲಿಯಾ ಭಟ್‌ ಸಹ ಪ್ರತಿಕ್ರಿಯಿಸಿದ್ದು, ಶುಭಾಶಯಗಳು ಪುಷ್ಪಾ!, ’ನಿಮ್ಮ ಅಭಿಯನವು ಅದ್ಭುತವಾಗಿದ್ದು, ನಿಮ್ಮ ದೊಡ್ಡ ಅಭಿಮಾನಿ‘ ಎಂದೂ ತಿಳಿಸಿದ್ದಾರೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕಳೆದ ವಾರ ಘೋಷಣೆಯಾಗಿದೆ. ‘ಗಂಗೂಬಾಯಿ ಕಥಿಯಾವಾಡಿ’ ಮತ್ತು ‘ಮಿಮಿ’ ಚಿತ್ರದ ಅಭಿನಯಕ್ಕಾಗಿ ಬಾಲಿವುಡ್‌ ನಟಿ ಅಲಿಯಾ ಭಟ್‌ ಮತ್ತು ಕೃತಿ ಸನೋನ್‌ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ‍ಪಡೆದುಕೊಂಡಿದ್ದಾರೆ. ‘ಪುಷ್ಪ’ ಚಿತ್ರದ ನಟನೆಗೆ ಅಲ್ಲು ಅರ್ಜುನ್‌ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ.

2022ನೇ ಸಾಲಿನಲ್ಲಿ ಬಿಡುಗಡೆಯಾದ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಕನ್ನಡ ಚಿತ್ರ ಪಶಸ್ತಿಯನ್ನು ‘777 ಚಾರ್ಲಿ’ ಪಡೆದುಕೊಂಡಿದೆ.

ಅತ್ಯುತ್ತಮ ನೃತ್ಯ ನಿರ್ದೇಶನ(ನಾಟು ನಾಟು), ಸಾಹಸ ನಿರ್ದೇಶನ ಮತ್ತು ಸ್ಪೆಷಲ್‌ ಎಫೆಕ್ಟ್ ವಿಭಾಗದಲ್ಲಿ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಚಿತ್ರ ಆಯ್ಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT