ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಮೂವರಾಗುತ್ತಿದ್ದೇವೆ: ತಾಯಿಯಾಗುತ್ತಿರುವ ಸುದ್ದಿ ಹಂಚಿಕೊಂಡ ಅಮಲಾ ಪೌಲ್

Published 4 ಜನವರಿ 2024, 11:04 IST
Last Updated 4 ಜನವರಿ 2024, 11:04 IST
ಅಕ್ಷರ ಗಾತ್ರ

ಮುಂಬೈ: ನಟಿ ಅಮಲಾ ಪೌಲ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಅಮಲಾ ಪೌಲ್ ಹಾಗೂ ಜಗತ್ ದೇಸಾಯಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಫೋಟೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಅಮಲಾ ಪೌಲ್

ಅಮಲಾ ಪೌಲ್

ಬುಧವಾರ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಅಮಲಾ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ಇಬ್ಬರು ಮೂವರಾಗುತ್ತಿದ್ದೇವೆ. 1+1 is 3 ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ. ನಟಿಯ ಪೋಸ್ಟ್‌ಗೆ ನಟ, ನಟಿಯರು ಹಾಗೂ ಅಭಿಮಾನಿಗಳು ಶುಭಕೋರಿದ್ದಾರೆ.

2023ರ ನವೆಂಬರ್‌ನಲ್ಲಿ ಅಮಲಾ ಪೌಲ್ ಹಾಗೂ ಜಗತ್ ದೇಸಾಯಿ ಕೊಚ್ಚಿಯಲ್ಲಿ ವಿವಾಹವಾಗಿದ್ದರು. ಅಮಲಾ ಅವರಿಗೆ ಇದು 2ನೇ ಮದುವೆಯಾಗಿತ್ತು. ನಿರ್ದೇಶಕ ವಿಜಯ್ ಜೊತೆಗೆ 2014ರಲ್ಲಿ ಹಸೆಮಣೆ ಏರಿದ್ದ ಅಮಲಾ ಬಳಿಕ 2017ರಲ್ಲಿ ವಿಚ್ಛೇದನ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT