ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಮಿಗಳ ದಿನಕ್ಕೆ ‘ಅಮರ್’ ಚಿತ್ರದ ಟೀಸರ್

ರೆಬೆಲ್‍ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಾಯಕ
Last Updated 24 ಜನವರಿ 2019, 20:00 IST
ಅಕ್ಷರ ಗಾತ್ರ

ರೆಬೆಲ್‍ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಾಯಕರಾಗಿ ನಟಿಸುತ್ತಿರುವ ‘ಅಮರ್’ ಚಿತ್ರದ ಮೊದಲ ಟೀಸರ್ ಫೆಬ್ರುವರಿ 13ರ ಮಧ್ಯರಾತ್ರಿ 12 ಗಂಟೆಗೆ ಬಿಡುಗಡೆಯಾಗಲಿದೆ. ಸಂದೇಶ್ ಕಂಬೈನ್ಸ್ ಮೂಲಕ ಸಂದೇಶ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲದೆ ಊಟಿ, ಕೇರಳ, ಕೊಯಮತ್ತೂರು ಹಾಗೂ ಸ್ವಿಜರ್‌ ಲ್ಯಾಂಡ್‍ನಲ್ಲೂ ಚಿತ್ರದ ಚಿತ್ರೀಕರಣವಾಗಿದೆ. ಫೆ.11ರಿಂದ ಸಿಂಗಪುರದಲ್ಲಿ ಚಿತ್ರೀಕರಣ ನಡೆಯಲಿದೆ.

ನಾಗಶೇಖರ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಹಾಗೂ ಸತ್ಯ ಹೆಗಡೆ ಛಾಯಾಗ್ರಹಣವಿದೆ. ತಾರಾಬಳಗದಲ್ಲಿ ತಾನ್ಯಾ ಹೋಪ್, ಸುಧಾರಾಣಿ, ದೇವರಾಜ್, ದೀಪಕ್ ಶೆಟ್ಟಿ, ಅರುಣ್ ಸಾಗರ್, ಚಿಕ್ಕಣ್ಣ, ಸಾಧುಕೋಕಿಲ, ನಿರೂಪ್ ಭಂಡಾರಿ ಇದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT