ತೆಲುಗು ನಟ ಪ್ರಭಾಸ್ ಮತ್ತು ಕನ್ನಡತಿ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ರಾಧೆ ಶ್ಯಾಮ್’ ಚಿತ್ರದ ಒಟಿಟಿ ಹಕ್ಕನ್ನು ಅಮೆಜಾನ್ ಸುಮಾರು ₹500 ಕೋಟಿ ಮೊತ್ತಕ್ಕೆ ಖರೀದಿಸಿದೆ ಎಂಬುದು ವರದಿಯಾಗಿದೆ.

ಈ ಬಗ್ಗೆ ಚಿತ್ರತಂಡವಾಗಲಿ ಅಥವಾ ಅಮೆಜಾನ್ ಆಗಲಿ ಅಧಿಕೃತವಾಗಿ ಖಚಿತಪಡಿಸಿಲ್ಲ. ಆದರೆ ಟಾಲಿವುಡ್‌ನ ಬಲ್ಲ ಮೂಲಗಳ ಪ್ರಕಾರ ಅಮೆಜಾನ್ ಪ್ರೈಂ ₹500 ಕೋಟಿ ನೀಡಿ ಒಟಿಟಿ ಹಕ್ಕನ್ನು ಖರೀದಿಸಿದೆ ಎಂದು ಹೇಳಲಾಗುತ್ತಿದೆ.

ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು ದಸರಾ ವೇಳೆಗೆ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿದೆ. ಒಂದು ವೇಳೆ ಕೋವಿಡ್ ಪರಿಣಾಮ ಲಾಕ್‌ಡೌನ್ ಮುಂದುವರಿದರೆ ಚಿತ್ರವನ್ನು ಒಟಿಟಿ ವೇದಿಕೆಯಲ್ಲಿಬಿಡುಗಡೆ ಮಾಡಲು ಚಿಂತಿಸಲಾಗಿದೆ ಎಂದು ಟಿ ಸೀರೀಸ್‌ನ ಸಂಸ್ಥೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಆಕ್ಷ್ಯನ್ ಕಟ್ ಹೇಳಿದ್ದು, ಈ ಚಿತ್ರವನ್ನು ಗೋಪಿ ಕೃಷ್ಣ ಮೂವೀಸ್, ಯುವಿ ಕ್ರಿಯೇಷನ್ಸ್ ಮತ್ತು ಟಿ ಸಿರೀಸ್ ನಿರ್ಮಿಸುತ್ತಿದೆ. ಸಚಿನ್ ಖೇಡೇಕರ್, ಪ್ರಿಯದರ್ಶಿ ಪುಲಿಕೊಂಡ, ಭಾಗ್ಯಶ್ರೀ, ಮುರ್ಲಿ ಶರ್ಮಾ, ಕುನಾಲ್ ರಾಯ್ ಕಪೂರ್, ರಿದ್ದಿ ಕುಮಾರ್, ಸಶಾ ಛೆಟ್ರಿ, ಸತ್ಯನ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.