ಸೋಮವಾರ, ಮಾರ್ಚ್ 1, 2021
19 °C

‘ತಾಂಡವ್‌’: ಬದಲಾವಣೆಗೆ ಮುಂದಾದ ನಿರ್ದೇಶಕರು

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ತಾಂಡವ್‌’ ವೆಬ್‌ ಸರಣಿ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ಅಮೆಜಾನ್‌ ಪ್ರೈಮ್‌ ಒಪ್ಪಿಕೊಂಡಿದೆ.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಹಿಂದೂ ದೇವತೆಗಳನ್ನು ಅವಮಾನ ಮಾಡಲಾಗಿದೆ ಎಂದು ಹಲವು ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಚಿತ್ರದ ನಿರ್ಮಾಪಕರ ವಿರುದ್ಧ ಎಫ್‌ಐಆರ್‌ ಸಹ ದಾಖಲಿಸಲಾಗಿತ್ತು. ಬಳಿಕ, ಚಿತ್ರ ತಂಡ ಕ್ಷಮೆಯಾಚಿಸಿತ್ತು.

‘ತಾಂಡವ್‌ ವೆಬ್‌ ಸರಣಿ ಚಿತ್ರದಲ್ಲಿ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ’ ಎಂದು ನಿರ್ದೇಶಕ ಅಲಿ ಅಬ್ಬಾಸ್‌ ಝಾಫರ್‌ ಟ್ವೀಟ್‌ ಮಾಡಿದ್ದಾರೆ.

‘ತಾಂಡವ್‌ ಒಂದು ಕಾಲ್ಪನಿಕ ಚಿತ್ರ. ಇಲ್ಲಿನ ಪಾತ್ರಗಳು ಯಾವುದಾದರೂ ಸನ್ನಿವೇಶಕ್ಕೆ ಅಥವಾ ವ್ಯಕ್ತಿಗೆ ಹೋಲಿಕೆಯಾಗಿದ್ದರೆ ಅದೊಂದು ಆಕಸ್ಮಿಕ’ ಎಂದು ಹೇಳಿದ್ದಾರೆ.

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಈ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು