ಸೋಮವಾರ, ಜೂನ್ 27, 2022
28 °C

ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ನೀಡಿದ ನಟಿ ಅಮೀಶಾ ಪಟೇಲ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Ameesha Patel Instagram

ಬೆಂಗಳೂರು: ಬಾಲಿವುಡ್ ನಟಿ ಅಮೀಶಾ ಪಟೇಲ್ ಜೂನ್ 9ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಈ ಬಾರಿ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ಅವರು, ಅಭಿಮಾನಿಗಳಿಗಾಗಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಜತೆಗೆ ಎಲ್ಲರೂ ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ ಎಂಬ ಸಂದೇಶ ಕೂಡ ನೀಡಿದ್ದಾರೆ.

ಅಲ್ಲದೆ, ಟ್ವಿಟರ್ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಿರುವ ನಟಿ ಅಮೀಶಾ ಪಟೇಲ್, ಹುಟ್ಟುಹಬ್ಬದ ಸಂದರ್ಭದಲ್ಲಿ ಶುಭಕೋರಿದ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ಹೀಗೇ ಇರಲಿ ಎಂದಿದ್ದಾರೆ.

ರಜಾ ಅವಧಿಯಲ್ಲಿ ಗೋವಾ ತೆರಳಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಯೋಜಿಸಿದ್ದ ನಟಿ ಅಮೀಶಾ, ಈ ಬಾರಿ ಗೋವಾದಲ್ಲಿನ ರಜಾದಿನಗಳನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ದೇಶದಲ್ಲಿ ಲಾಕ್‌ಡೌನ್ ಇರುವುದರಿಂದ ಸಿನಿಮಾ ನಟ ನಟಿಯರ ಬರ್ತ್‌ಡೇ ಆಚರಣೆಗೆ ಬ್ರೇಕ್ ಬಿದ್ದಿದೆ. 

ಹೊರಗಡೆ ಹೋಗಲು ನಿರ್ಬಂಧ ಮತ್ತು ಹೋಟೆಲ್, ಪ್ರವಾಸಿ ತಾಣಗಳಿಗೆ ಪ್ರಯಾಣ ನಿರ್ಬಂಧವಿರುವುದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಇರುವಂತೆ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು