ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಪರಿಣೀತಿ ಚೋಪ್ರಾ ಜೊತೆ ಮದುವೆ ವದಂತಿ: ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದೇನು?

Last Updated 11 ಏಪ್ರಿಲ್ 2023, 11:06 IST
ಅಕ್ಷರ ಗಾತ್ರ

ನವದೆಹಲಿ: ಆಮ್‌ ಆದ್ಮಿ ಪಕ್ಷದ ನಾಯಕ ಹಾಗೂ ಸಂಸದ ರಾಘವ್ ಚಡ್ಡಾ ಮತ್ತು ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಮದುವೆಯಾಗಲಿದ್ದಾರೆ ಎಂಬ ವದಂತಿ ಎದ್ದಿರುವ ಬೆನ್ನಲ್ಲೇ ಈ ಕುರಿತು ರಾಘವ ಚಡ್ಡಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಎಎಪಿಗೆ ರಾಷ್ಟ್ರೀಯ ಪಕ್ಷ ಮಾನ್ಯತೆ ಬಂದಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡುವಾಗ ಸಂದರ್ಶಕರಿಂದ ಆಕಸ್ಮಿಕವಾಗಿ ರಾಘವ್ ಅವರು ಪರಿಣೀತಿ ಚೋಪ್ರಾ ಬಗೆಗಿನ ಪ್ರಶ್ನೆ ಎಸೆದರು.

ಈ ವೇಳೆ ರಾಘವ್ ನಗುತ್ತಾ ನಾನು ನೀಮಗೆ ಹೇಳುತ್ತೇನೆ ಎಂದು ಚುಟುಕಾಗಿ ಅಷ್ಟೇ ಉತ್ತರಿಸಿದ್ದಾರೆ. ಎಎಪಿಗೆ ರಾಷ್ಟ್ರೀಯ ಮಾನ್ಯತೆ ಬಂದಿರುವುದು ಇದು ಅದ್ಭುತಗಳಿಗೆ ಸಮ ಎಂದು ಬಣ್ಣಿಸಿದ್ದಾರೆ.

ಈ ಜೋಡಿ ಇತ್ತೀಚಿನ ದಿನಗಳಲ್ಲಿ ಕ್ಯಾಮರಾ ಕಣ್ಣಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಏ‍ಪ್ರಿಲ್‌ ಕೊನೆ ವಾರದಲ್ಲಿ ಈ ಜೋಡಿ ಪರಸ್ಪರ ಉಂಗುರ ಬದಲಾಯಿಸಿಕೊಳ್ಳಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ರಾಘವ ಚಡ್ಡಾ ಸದ್ಯ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಣೀತಿ ಚೋಪ್ರಾ ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯ ನಟಿ ಏನಿಸಿಕೊಂಡಿದ್ದಾರೆ. ಪ್ರಿಯಾಂಕ ಚೋಪ್ರಾ ಸಂಬಂಧಿಯೂ ಆಗಿದ್ದಾರೆ.

ಮೊದಲ ಬಾರಿಗೆ ಈ ಜೋಡಿ ಲಂಡನ್‌ನಲ್ಲಿ ಕಾಣಿಸಿದ್ದು, ತದನಂತರ ಮುಂಬೈನ ಹೋಟೆಲ್‌ವೊಂದರಲ್ಲಿ ಕ್ಯಾಮರಾ ಕಣ್ಣಿಗೆ ಬಿದ್ದಿದ್ದರು. ಇತ್ತೀಚೆಗೆ ದೆಹಲಿ ಮತ್ತು ಮುಂಬೈನ ಏರ್‌ಪೋರ್ಟ್‌ನಲ್ಲಿಯೂ ಕಾಣಿಸಿಕೊಂಡಿದ್ದರು. ಆ ಮೂಲಕ ಡೇಟಿಂಗ್‌ ನಡೆಸುತ್ತಿದ್ದಾರೆ ಎಂಬ ಅನುಮಾನಕ್ಕೆ ಪುಷ್ಟಿ ನೀಡಿದ್ದರು.

ಇತ್ತೀಚೆಗೆ ಪರಿಣಿತಿ ಚೋಪ್ರಾ ಪ್ರಖ್ಯಾತ ವಸ್ತ್ರವಿನ್ಯಾಸಕ ಮನೀಶ್‌ ಮಲ್ಹೋತ್ರ ಅವರ ಮನೆಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಇವರಿಬ್ಬರು ಎಂಗೇಜ್‌ಮೆಂಟ್‌ ಸುದ್ದಿ ಹರಿದಾಡುತ್ತಿದೆ.

ಮೂಲವೊಂದರ ಪ್ರಕಾರ ಈ ಸಮಾರಂಭದಲ್ಲಿ ಕುಟುಂಬ ಸದಸ್ಯರು ಹಾಗೂ ಸ್ನೇಹಿತರಷ್ಟೇ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಜನಪ್ರಿಯ ನಟಿ ಪ್ರಿಯಾಂಕ ಚೋಪ್ರಾ ಹಾಗೂ ನಿಕ್‌ ಜೋನಾಸ್‌ ದಂಪತಿ, ಮೀರಾ ಚೋಪ್ರಾ ಎಂಗೇಜ್‌ಮೆಂಟ್‌ನಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT