ಸೋಮವಾರ, ಅಕ್ಟೋಬರ್ 3, 2022
24 °C
ಅಮೀರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಸಿನಿಮಾ

₹50 ಕೋಟಿ ಗಳಿಸಲಷ್ಟೇ ಶಕ್ತವಾದ ಅಮೀರ್ ಅಭಿನಯದ ‘ಲಾಲ್ ಸಿಂಗ್ ಚಡ್ಡಾ‘

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಬಾಲಿವುಡ್ ನಟ ಅಮೀರ್ ಖಾನ್ ಅಭಿನಯದ ‘ಲಾಲ್ ಸಿಂಗ್ ಚಡ್ಡಾ‘ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೋಲು ಕಂಡಿದೆ.

ಕಳೆದ ವಾರ ಬಿಡುಗಡೆಯಾಗಿರುವ ಅಮೀರ್ ಸಿನಿಮಾ, ಒಂದು ವಾರದಲ್ಲಿ ₹50 ಕೋಟಿ ಗಳಿಸಲಷ್ಟೇ ಶಕ್ತವಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಮತ್ತು ಸಾಲು ಸಾಲು ರಜೆಗಳು ಇದ್ದರೂ, ಸಿನಿಮಾ ತಂಡದವರ ಲೆಕ್ಕಾಚಾರದಂತೆ ನಿರೀಕ್ಷಿತ ಗಳಿಕೆ ಕಾಣುವಲ್ಲಿ ಲಾಲ್ ಸಿಂಗ್ ಚಡ್ಡಾ ವಿಫಲವಾಗಿದೆ.

ಸಿನಿಮಾ ಬಿಡುಗಡೆಗೂ ಮೊದಲು ನಟ ಅಮೀರ್ ಖಾನ್ ಅವರು ನೀಡಿದ್ದ ಕೆಲವೊಂದು ಹೇಳಿಕೆಗಳ ಪರಿಣಾಮ, ಸಿನಿಮಾಗೆ ಬಹಿಷ್ಕಾರದ ಬಿಸಿ ತಟ್ಟಿದೆ.

ಹೀಗಾಗಿ ಅಮೀರ್ ಸಿನಿಮಾ ಗಳಿಕೆಯಲ್ಲಿ ಇಳಿಕೆ ಕಂಡಿದೆ ಎಂಬ ಮಾತು ಬಾಲಿವುಡ್ ವಲಯದಲ್ಲಿ ಕೇಳಿಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು