ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತಾಭ್​ ಆಸ್ಪತ್ರೆಗೆ ದಾಖಲು: ಬೇಗ ಗುಣಮುಖರಾಗಿ ಎನ್ನುತ್ತಿರುವ ಅಭಿಮಾನಿಗಳು

Published 15 ಮಾರ್ಚ್ 2024, 10:36 IST
Last Updated 15 ಮಾರ್ಚ್ 2024, 10:36 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ಹಿರಿಯ ನಟ, ಬಿಗ್‌ ಬಿ ಖ್ಯಾತಿಯ ನಟ ಅಮಿತಾಭ್​ ಬಚ್ಚನ್ ಅನಾರೋಗ್ಯದಿಂದಾಗಿ ಅವರು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

81 ವರ್ಷದ ಅಮಿತಾಭ್‌ಗೆ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಇರುವುದರಿಂದ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಗುರುವಾರ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು ಅವರು ಆರೋಗ್ಯವಾಗಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ. 

ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ್ದು, ‘ಎಂದೆಂದಿಗೂ ಚಿರಋಣಿ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ಗೆ ಅಭಿಮಾನಿಗಳು ಬೇಗ ಗುಣಮುಖರಾಗಿ ಎಂದು ಹೇಳುತ್ತಿದ್ದಾರೆ.

ಆದರೆ ಈ ಬಗ್ಗೆ ಆಸ್ಪತ್ರೆ ಅಥವಾ ಕುಟುಂಬದವರು ಯಾವುದೇ ಮಾಹಿತಿ ನೀಡಿಲ್ಲ. ಈ ಬಗ್ಗೆ ಹೆಲ್ತ್​ ಅಪ್​ಡೇಟ್​ ನೀಡಬೇಕು ಎಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ. 

ಸಿನಿಮಾ ಕ್ಷೇತ್ರದಲ್ಲಿ ಬೇಡಿಕೆ ಇರಿಸಿಕೊಂಡಿರುವ ಅಮಿತಾಬ್‌ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರು ಪ್ರಭಾಸ್​ ನಟನೆಯ ‘ಕಲ್ಕಿ’ಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಜನಿಕಾಂತ್​ ನಾಯಕ ನಟರಾಗಿರುವ ‘ವೆಟ್ಟೈಯಾನ್​’ ಸಿನಿಮಾದಲ್ಲೂ ಅಮಿತಾಭ್​ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್‌ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT