ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗ್‌–ಬಿ ಅಮಿತಾಬ್ ಬಚ್ಚನ್‌ಗೆ ಲತಾ ದೀನಾನಾಥ್ ಮಂಗೇಶ್ಕರ್ ಪುರಸ್ಕಾರ ಪ್ರದಾನ

Published 24 ಏಪ್ರಿಲ್ 2024, 15:46 IST
Last Updated 24 ಏಪ್ರಿಲ್ 2024, 15:46 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ನ ಹಿರಿಯ ಅಮಿತಾಬ್ ಬಚ್ಚನ್‌ಗೆ ಲತಾ ದೀನಾನಾಥ್ ಮಂಗೇಶ್ಕರ್ ಪುರಸ್ಕಾರವನ್ನು ಬುಧವಾರ ಪ್ರದಾನ ಮಾಡಲಾಯಿತು.

ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು 2022ರಲ್ಲಿ ನಿಧನರಾದ ನಂತರ ಅವರ ಹೆಸರಿನಲ್ಲಿ ಅವರ ಕುಟುಂಬ ಮತ್ತು ಟ್ರಸ್ಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ.

ಲತಾ ಅವರ ತಂದೆ ದೀನಾನಾಥ ಮಂಗೇಶ್ಕರ್ ಅವರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ರಾಷ್ಟ್ರ ನಿರ್ಮಾಣದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ ಮೊದಲಿಗರು. 2023ರಲ್ಲಿ ಆಶಾ ಬೋಸ್ಲೆ ಅವರಿಗೆ ಪ್ರದಾನ ಮಾಡಲಾಗಿತ್ತು.

ಅದರಂತೆಯೇ 81 ವರ್ಷದ ಅಮಿತಾಬ್ ಅವರು ಈ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಕಳೆದ ಐದು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿರುವ ಅಮಿತಾಬ್‌ ಝಂಜೀರ್, ದೀವಾರ್, ಚುಪ್ಕೆ ಚುಪ್ಕೆ, ಮೊಹಬತ್ತೇ, ಪಿಕು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗಲೂ ಅಭಿನಯಿಸುತ್ತಿದ್ದಾರೆ.

‘ಇಂಥ ಶ್ರೇಷ್ಠ ಪ್ರಶಸ್ತಿಗೆ ನಾನು ಅರ್ಹ ಎಂದು ಎಂದಿಗೂ ಭಾವಿಸಿಲ್ಲ. ಆದರೆ ಹೃದಯನಾಥ್ ಮಂಗೇಶ್ಕರ್ ಅವರು ನಾನು ಇಲ್ಲಿಗೆ ಬರಲು ಬಲವಂತಪಡಿಸಿದರು. ಕಳೆದ ವರ್ಷವೂ ನನ್ನನ್ನು ಆಹ್ವಾನಿಸಿದ್ದರು. ಕಳೆದ ಬಾರಿ ಬಾರದಿರುವುದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಆಗ ಆರೋಗ್ಯ ಉತ್ತಮವಾಗಿರಲಿಲ್ಲ ಎಂದು ಹೇಳಿದ್ದೆ. ಆದರೆ ನಾನು ಆಗ ಆರೋಗ್ಯವಾಗಿದ್ದೆ. ಆದರೆ ಬರಲು ಮನಸ್ಸಿರಲಿಲ್ಲ. ಆದರೆ ಈ ವರ್ಷ ಹೇಳಲು ನನ್ನ ಬಳಿ ಯಾವುದೇ ಕಾರಣ ಇರಲಿಲ್ಲ. ಹೀಗಾಗಿ ಬರಲೇಬೇಕಾಯಿತು’ ಎಂದು ಪ್ರಶಸ್ತಿ ಸ್ವೀಕರಿಸಿ ಅಮಿತಾಬ್ ತಮ್ಮ ಅನಿಸಿಕೆ ಹಂಚಿಕೊಂಡರು.

ಪ್ರಶಸ್ತಿಯನ್ನು ಆಶಾ ಬೋಸ್ಲೆ ಪ್ರದಾನ ಮಾಡಬೇಕಿತ್ತು. ಆದರೆ ಅನಾರೋಗ್ಯದಿಂದ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಹೀಗಾಗಿ ಲತಾ ಮಂಗೇಶ್ಕರ್ ಅವರ ಸೋದರಿ ಉಷಾ ಮಂಗೇಶ್ಕರ್ ಅವರು ಅಮಿತಾಬ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲತಾ ಅವರ ಸೋದರ ಹೃದಯನಾಥ ಮಂಗೇಶ್ಕರ್ ಅವರು ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT