ಶನಿವಾರ, ಸೆಪ್ಟೆಂಬರ್ 18, 2021
30 °C

ಪ್ರಭಾಸ್, ದೀಪಿಕಾ, ಅಮಿತಾಬ್ ಬಚ್ಚನ್ ಅಭಿನಯದ 'ಪ್ರಾಜೆಕ್ಟ್‌ ಕೆ' ಚಿತ್ರೀಕರಣ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

'ಮಹಾನಟಿ' ಖ್ಯಾತಿಯ ನಿರ್ದೇಶಕ ನಾಗ್ ಅಶ್ವಿನ್‌ ಅವರ 'ಪ್ರಾಜೆಕ್ಟ್‌ ಕೆ' ಸಿನೆಮಾದ ಚಿತ್ರೀಕರಣವು ಶನಿವಾರ ಹೈದರಾಬಾದ್‌ನಲ್ಲಿ ಆರಂಭವಾಗಿದೆ.

ಹಿರಿಯ ನಟ ಅಮಿತಾಭ್‌ ಬಚ್ಚನ್ ಅವರ ಮೊದಲ ದೃಶ್ಯಕ್ಕೆ ಬಾಹುಬಲಿ ಖ್ಯಾತಿಯ ಪ್ರಭಾಸ್‌ ಕ್ಲ್ಯಾಪ್‌ ಮಾಡಿದರು.

ಶೂಟಿಂಗ್‌ ಸೆಟ್‌ನಲ್ಲಿನ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಪ್ರಭಾಸ್‌, 'ಭಾರತೀಯ ಚಿತ್ರರಂಗದ ಗುರುವಿನೊಂದಿಗೆ ನಟಿಸುತ್ತಿರುವುದಕ್ಕೆ ಪುಣ್ಯ ಮಾಡಿದ್ದೇನೆ' ಎಂದು ಹೇಳಿದ್ದಾರೆ.

ನಾಗ್ ಅಶ್ವಿನ್ ನಿರ್ದೇಶನದ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಪ್ರಭಾಸ್, ಅಮಿತಾಭ್‌ ಬಚ್ಚನ್ ನಟಿಸುತ್ತಿದ್ದಾರೆ. ಇದು ಪ್ರಭಾಸ್ ಅವರ 21ನೇ ಚಿತ್ರ. ಈ ಸಿನಿಮಾವನ್ನು ವೈಜಯಂತಿ ಮೂವೀಸ್ ನಿರ್ಮಾಣ ಮಾಡುತ್ತಿದೆ.

ಪ್ರಾಜೆಕ್ಟ್‌ ಕೆ ಚಿತ್ರವು ಸೈಂಟಿಫಿಕ್‌ ಕಥನವನ್ನು ಹೊಂದಿದೆ. ಭವಿಷ್ಯದಲ್ಲಿ ನಡೆಯಲಿರುವ ಥರ್ಡ್‌ ವರ್ಲ್ಡ್‌ ವಾರ್‌ನ ಕಲ್ಪನೆಯಡಿ ಇದರ ಚಿತ್ರಕಥೆ ಹೆಣೆಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು