ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರವು ಅಮೆಜಾನ್ ಪ್ರೈಂ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಲಾಂಛನದಲ್ಲಿ ಪುಟ್ಟಣ್ಣ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ಚಿತ್ರವು ಹದಿಮೂರನೇ ಶತಮಾನದ ಕನ್ನಡ ಕವಿ ಜನ್ನನ ‘ಯಶೋಧರ ಚರಿತ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ವಿಶೇಷ. ಬರಗೂರು ಅವರು ನಿರ್ದೇಶನದ ಜೊತೆಗೆ ಚಿತ್ರಕಥೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ. ನಟಿ ಹರಿಪ್ರಿಯ ಅವರು ‘ಅಮೃತಮತಿ’ಯ ಪಾತ್ರದಲ್ಲಿ, ನಟ ಕಿಶೋರ್ ಅವರು ‘ಯಶೋಧರ’ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಂದರ್ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಚಿತ್ರಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.