ಸೋಮವಾರ, ಮಾರ್ಚ್ 20, 2023
25 °C

ಮಂಡ್ಯ ಹುಡ್ಗಿ ‘ಟಗರುಪಲ್ಯ’ ಬೆಡಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್‌ವುಡ್ ಅಂಗಳಕ್ಕೆ ಹೆಜ್ಜೆ ಇಟ್ಟಿರುವ ‘ನೆನಪಿರಲಿ’ ಪ್ರೇಮ್ ಪುತ್ರಿ ಅಮೃತ ಪ್ರೇಮ್‌ ತಮ್ಮ ಚೊಚ್ಚಲ ಚಿತ್ರದಲ್ಲಿ ಮಂಡ್ಯ ಹುಡುಗಿಯಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಉಮೇಶ್ ಕೆ. ಕೃಪ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು, ಚಿತ್ರದಲ್ಲಿ ಅಮೃತ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ಪಾತ್ರಕ್ಕಾಗಿ ವರ್ಕ್‌ಶಾಪ್‌ ಮೂಲಕ ತಯಾರಿ ಮಾಡಿಕೊಂಡಿರುವ ಅಮೃತ ಪಾತ್ರಕ್ಕೆ ಜೀವ ತುಂಬಿದ್ದಾರೆ ಎನ್ನುತ್ತಿದೆ ಚಿತ್ರತಂಡ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರಂತೆ ಅಮೃತ. ಮಂಡ್ಯ ಸ್ಲ್ಯಾಂಗ್ ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಈಗಾಗಲೇ ಚಿತ್ರದ ಎರಡು ಶೆಡ್ಯೂಲ್ ಪೂರ್ಣಗೊಂಡಿವೆ’ ಎನ್ನುತ್ತಾರೆ ಉಮೇಶ್‌.

ನಟ ‘ಡಾಲಿ’ ಧನಂಜಯ ನಿರ್ಮಾಣ ಸಂಸ್ಥೆಯಡಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ‘ಇಕ್ಕಟ್’ ಖ್ಯಾತಿಯ ನಾಗಭೂಷಣ್‌ಗೆ ಅಮೃತ ಇಲ್ಲಿ ಜೋಡಿಯಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು