ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಆ್ಯಮಿ ನಿಶ್ಚಿತಾರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇತ್ತೀಚೆಗಷ್ಟೇ ತಾನು ಗರ್ಭಿಣಿ ಎಂದು ಸುದ್ದಿಯ ಕೇಂದ್ರವಾಗಿದ್ದ ನಟಿ ಆ್ಯಮಿ ಜಾಕ್ಸನ್‌ ಈಚೆಗಷ್ಟೆ ಲಂಡನ್‌ನಲ್ಲಿ ಗೆಳೆಯ ಜಾರ್ಜ್ ಪನಾಯಿಟೊ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ  ಬಗ್ಗೆ ವಿಡಿಯೊ ಮತ್ತು ಫೋಟೊಗಳನ್ನು ಆ್ಯಮಿ ಹಂಚಿಕೊಂಡಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಪ್ತರನ್ನಷ್ಟೇ ಆಹ್ವಾನಿಸಿದ್ದ ಆ್ಯಮಿ, ಜಾರ್ಜ್ ಜತೆಗೆ ಡಾನ್ಸ್ ಮಾಡಿರುವ ವಿಡಿಯೊ ವೈರಲ್ ಆಗಿದೆ.  ‘ಗ್ರೀಕ್ ಸಂಪ್ರದಾಯದ ರೀತಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡೆವು. ಈ ಸಮಾರಂಭವನ್ನು ವಿಶೇಷವನ್ನಾಗಿ ರೂಪಿಸಿದ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ಧನ್ಯವಾದಗಳು. ಎಲ್ಲರಿಗೂ ತುಂಬಾ ಪ್ರೀತಿ’ ಎಂದು ಆ್ಯಮಿ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.  

ನಿಶ್ಚಿತಾರ್ಥದಲ್ಲಿ ಜಾರ್ಜ್ ವೈಟ್ ಸೂಟ್‌ನಲ್ಲಿ ಕಂಗೊಳಿಸುತ್ತಿದ್ದರೆ, ಆ್ಯಮಿ ಕಪ್ಪು ಮತ್ತು ಬಿಳುಪಿನ ಉಡುಪಿನಲ್ಲಿ ಆಕರ್ಷಕವಾಗಿ ಕಾಣುತ್ತಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು