ಕೋವಿಡ್ ನಿಯಮ ಉಲ್ಲಂಘನೆ: ಟೈಗರ್ ಶ್ರಾಫ್ ಮತ್ತು ದಿಶಾ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈ: ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಬಾಲಿವುಡ್ ನಟ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಬಾಂದ್ರಾದಲ್ಲಿ ಕಾರಿನಲ್ಲಿ ಜಾಲಿ ರೈಡ್ ಮಾಡುತ್ತಿದ್ದ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ಅವರನ್ನು ಪೊಲೀಸರು ತಡೆದು ವಿಚಾರಣೆ ನಡೆಸಿದ್ದರು.
ಇವರಿಬ್ಬರ ವಿರುದ್ಧ ಐಪಿಸಿ ಸೆಕ್ಷನ್ 188 ಅಡಿಯಲ್ಲಿ (ಸಾರ್ವಜನಿಕ ಆದೇಶಕ್ಕೆ ಅಸಹಕಾರ) ಬುಧವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಮುಂಬೈ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ವರ್ಕೌಟ್ ಮುಗಿಸಿ ಜಿಮ್‌ನಿಂದ ವಾಪಸ್ ಆಗುವ ವೇಳೆ ಇಬ್ಬರು ಕಾರಿನಲ್ಲಿ ಬಾಂದ್ರಾದ ರಸ್ತೆಗಳಲ್ಲಿ ಸುತ್ತಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಟೈಗರ್ ಶ್ರಾಫ್ ಹಿಂದಿನ ಸೀಟಲ್ಲಿ ಕುಳಿತಿದ್ದರು ಮತ್ತು ದಿಶಾ ಪಟಾನಿ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಎರಡನೇ ಬಾರಿಗೆ ಬಾಂದ್ರಾದ ರಸ್ತೆಯಲ್ಲಿ ಕಾರು ಕಾಣಿಸಿಕೊಂಡಾಗ ಅಡ್ಡಗಟ್ಟಿದ ಪೊಲೀಸರು ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳನ್ನು ಪರಿಶೀಲಿಸಿ ಬಿಟ್ಟು ಕಳುಹಿಸಿದ್ದರು.
ಇದನ್ನೂ ಓದಿ... ಟೈಗರ್, ದಿಶಾ ಜಾಲಿ ರೈಡ್: ಅಡ್ಡಗಟ್ಟಿದ ಮುಂಬೈ ಪೊಲೀಸರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.