ಅದಿತಿ ಪ್ರಭುದೇವ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಹಾಗೂ ಭಾರತದ ಮೊದಲ ಮಹಿಳಾ ಪ್ರಧಾನ ಸೂಪರ್ ಹೀರೋ ಪರಿಕಲ್ಪನೆಯ ‘ಆನ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. 10 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದರು.

ಚಿತ್ರದ ನಿರ್ದೇಶಕ ಮನೋಜ್ ಪಿ. ನಡಲುಮನೆ ಮಾತನಾಡಿ, ‘ನಮ್ಮ ಚಿತ್ರದ ಟೀಸರ್‌ಗೆ ಅಪಾರ ಬೆಂಬಲ ಸೂಚಿಸುತ್ತಿರುವ ಎಲ್ಲರಿಗೂ ನಾನು ಚಿರಋಣಿ. ನಮ್ಮ ಟೀಸರ್‌ಗೆ ಇಲ್ಲಿ ಮಾತ್ರ ಅಲ್ಲ, ನೆರೆರಾಜ್ಯಗಳಿಂದಲ್ಲೂ ಟೀಸರ್ ವೀಕ್ಷಿಸಿದವರು ನನಗೆ ದೂರವಾಣಿ ಮೂಲಕ ಪ್ರಶಂಸೆ ನೀಡುತ್ತಿದ್ದಾರೆ. ಚಿತ್ರದ ನಿರ್ಮಾಪಕರು, ಕಲಾವಿದರು ಮತ್ತು ತಂತ್ರಜ್ಞರಿಗೆ ನಾನು ಆಭಾರಿ’ ಎಂದರು.

‘ಇನ್ನೂ ಹತ್ತುದಿನಗಳಲ್ಲಿ ಸಿನಿಮಾದ ಮೊದಲ ಪ್ರತಿ ಸಿದ್ಧವಾಗಲಿದೆ. ಏಪ್ರಿಲ್ ಕೊನೆಯ ವಾರ ಅಥವಾ ಮೇಯಲ್ಲಿ ತೆರೆಗೆ ತರುತ್ತೇವೆ’ ಎಂದರು.

ನಾಯಕಿ ಅದಿತಿ ಪ್ರಭುದೇವ ಮಾತನಾಡಿ, ‘ಲಾಕ್ ಡೌನ್ ಸಮಯದಲ್ಲಿ ಎಲ್ಲರಿಗೂ ಮುಂದೇನು? ಎಂಬ ಪ್ರಶ್ನೆ ಎದುರಾಗಿತ್ತು. ಅಂಥ ಸಮಯದಲ್ಲಿ ನಮ್ಮ ನಿರ್ಮಾಪಕರು ಈ ಚಿತ್ರದ ಕಥೆ ಇಷ್ಟಪಟ್ಟು ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರ ಸಾಹಸ ಮೆಚ್ಚಲೇಬೇಕು. ನಾನು ಮೊದಲಿನಿಂದಲೂ ಹಾರರ್, ಫ್ಯಾಂಟಸಿ ಸಿನಿಮಾ ಹೆಚ್ಚು ನೋಡುತ್ತೇನೆ. ಆ ಚಿತ್ರಗಳನ್ನು ನೋಡಿದಾಗ ನಾನು ಈ ರೀತಿ ಪಾತ್ರ ಮಾಡಬೇಕು ಅಂದುಕೊಳ್ಳುತ್ತಿದ್ದೆ. ಅಂತಹ ಪಾತ್ರ ನನಗೆ ಸಿಕ್ಕಿರುವುದು ನನಗೆ ಸಂತಸ ತಂದಿದೆ’ ಎಂದರು.

ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸುನೀಲ್ ಪುರಾಣಿಕ್ ಅವರು ತಮ್ಮ ಪಾತ್ರದ ಬಗ್ಗೆ ಮೆಚ್ಚುಗೆ ಸೂಚಿಸಿ, ಕಲಾವಿದರ ಕಾರ್ಯವನ್ನು ಶ್ಲಾಘಿಸಿದರು.

ಛಾಯಾಗ್ರಾಹಕ ಉದಯ್ ಲೀಲಾ, ಸಂಕಲನಕಾರ ವಿನೀತ್ ಚಂದ್ರ, ಕಲಾವಿದರಾದ ಚೇತನ್ ಗಂಧರ್ವ, ಶಿವಮಂಜು, ರನ್ವಿತ್ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಯು.ಕೆ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಅವರ ಸಂಗೀತ ನಿರ್ದೇಶನವಿರುವ ‘ಆನ’ಗೆ ವಿಜೇತ್ ಚಂದ್ರ ಅವರ ಸಂಕಲನವಿದೆ. ಅದಿತಿ ಪ್ರಭುದೇವ, ಸುನೀಲ್ ಪುರಾಣಿಕ್, ಚೇತನ್ ಗಂಧರ್ವ, ರನ್ವಿತ್ ಶಿವಕುಮಾರ್, ವಿಕಾಶ್ ಉತ್ತಯ್ಯ, ಪ್ರೇರಣ ಕಂಬಮ್, ವರುಣ್ ಅಮರವಾತಿ, ಸಮರ್ಥ್ ನರಸಿಂಹರಾಜು, ಕಾರ್ತಿಕ್ ನಾಗಾರಾಜನ್, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.