ಗುರುವಾರ , ಫೆಬ್ರವರಿ 27, 2020
19 °C

ಅನನ್ಯಾ ಪಾಂಡೆ ಮಸ್ತ್ ಡಾನ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಸ್ಟೂಡೆಂಟ್ ಆಫ್ ದಿ ಇಯರ್ 2’ ಚಿತ್ರದ ಬೆಡಗಿ ಅನನ್ಯಾ ಪಾಂಡೆ ಡಾನ್ಸ್ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅನನ್ಯಾ ಸಾರಾ ಅಲಿ ಖಾನ್ ನಟನೆಯ ‘ಸಿಂಬಾ’ ಚಿತ್ರದ ‘ಆಂಕ್ ಮಾರೆ’ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೊ ಅದು. ಈ ಡಾನ್ಸ್ ವಿಡಿಯೊವನ್ನು ಅನನ್ಯಾ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.   

ಈ ಕಾರ್ಯಕ್ರಮದಲ್ಲಿ ಬಣ್ಣದ ಲೆಹಂಗಾ ಧರಿಸಿದ್ದ ಅನನ್ಯಾ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದರು. ಜೊತೆಗೆ ತಮ್ಮ ಸಾಂಪ್ರದಾಯಿಕ ಉಡುಪಿನ ಚಿತ್ರವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲೂ ಹಂಚಿಕೊಂಡಿದ್ದರು.

ತಮ್ಮ ಚೊಚ್ಚಲ ಚಿತ್ರದಿಂದಲೇ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಈಕೆ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕ್ರಿಯಾಶೀಲರಾಗಿರುತ್ತಾರೆ. ಆ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಅಭಿಮಾನಿಗಳ ನೆಚ್ಚಿನ ‘ಸ್ಟಾರ್ ಕಿಡ್‌’ ಎನ್ನಿಸಿಕೊಂಡಿರುವ ಈ ಚೆಲುವೆಯನ್ನು ನೋಡಲು ಅಭಿಮಾನಿಗಳು ಕಾಯುತ್ತಿರುತ್ತಾರೆ.

ಕಾರ್ತಿಕ್ ಆರ್ಯನ್‌, ಭೂಮಿ ಪಡ್ನೇಕರ್ ಜೊತೆ ‘ಪತಿ ಪತ್ನಿ ಔರ್ ವೋ’ ಚಿತ್ರದಲ್ಲೂ ಅನನ್ಯಾ ನಟಿಸಿದ್ದರು. ಈ ಚಿತ್ರದಲ್ಲಿ ಆಕೆಯ ನಟನೆಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ.  

ಅನನ್ಯಾ ಸದ್ಯಕ್ಕೆ ‘ಖಾಲಿ ಪೀಲಿ’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇಷ್ಟೇ ಅಲ್ಲದೇ ದೀಪಿಕಾ ಪಡುಕೋಣೆ ಹಾಗೂ ಸಿದ್ಧಾಂತ್ ಚತುರ್ವೇದಿ ಅಭಿನಯದ ಚಿತ್ರದಲ್ಲೂ ಅನನ್ಯಾ ನಟಿಸಲಿದ್ದಾರೆ ಎಂಬ ಸುದ್ದಿಯೂ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದ್ದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು